ಗುರುವಾರ , ಏಪ್ರಿಲ್ 15, 2021
24 °C

ರಾಜ್ಯಪಾಲರಿಗೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭ್ರಷ್ಟಾಚಾರದ ಆರೋಪ ಹೊತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಈ ತಕ್ಷಣವೇ ಮುಖ್ಯಮಂತ್ರಿ ಪದವಿಯಿಂದ ವಜಾ ಮಾಡಬೇಕು ಎಂದು ಮಾಜಿ ಶಾಸಕ ಎ.ಕೆ.ಸುಬ್ಬಯ್ಯ ಸೇರಿದಂತೆ ಮೂವರು ಹೈಕೋರ್ಟ್ ವಕೀಲರು ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರನ್ನು ಆಗ್ರಹಪಡಿಸಿದ್ದಾರೆ.ಸುಬ್ಬಯ್ಯ ಅವರಲ್ಲದೆ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಪ್ರೊ ರವಿವರ್ಮ ಕುಮಾರ್, ಡಾ.ಸಿ.ಎಸ್. ದ್ವಾರಕಾನಾಥ್ ಅವರು ಶನಿವಾರ ರಾಜ್ಯಪಾಲರನ್ನು ಭೇಟಿ ಮಾಡಿ ಈ ಸಂಬಂಧ ದೂರು ಸಲ್ಲಿಸಿದರು.ಯಡಿಯೂರಪ್ಪ ಅವರು ಅಧಿಕಾರಿ ವಹಿಸಿಕೊಂಡ ದಿನದಿಂದ ಇಲ್ಲಿಯವರೆಗೆ ಅನೇಕ ಅಕ್ರಮಗಳಲ್ಲಿ ಭಾಗಿಯಾಗಿದ್ದು, ಅವರು ಪ್ರಮಾಣ ವಚನ ಸ್ವೀಕರಿಸಿದ್ದಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಹೀಗಾಗಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾ ಮಾಡಬೇಕು ಎಂದು ಸುಬ್ಬಯ್ಯ ಅವರು ಆಗ್ರಹಪಡಿಸಿದರು.


 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.