ರಾಜ್ಯಪಾಲರೊಂದಿಗೆ ಸಿ.ಎಂ ಮಾತುಕತೆ

7

ರಾಜ್ಯಪಾಲರೊಂದಿಗೆ ಸಿ.ಎಂ ಮಾತುಕತೆ

Published:
Updated:

ಬೆಂಗಳೂರು: ಕಾವೇರಿ ಚಳವಳಿ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಬುಧವಾರ ಸಂಜೆ ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ತಮಿಳುನಾಡಿಗೆ ಕಾವೇರಿ ನೀರು ಬಿಟ್ಟ ನಂತರ ರಾಜ್ಯದಲ್ಲಿನ ಪರಿಸ್ಥಿತಿ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡುವಂತೆಯೂ ಮುಖ್ಯಮಂತ್ರಿ ರಾಜ್ಯಪಾಲರಲ್ಲಿ ಮನವಿ ಮಾಡಿದರು. ರಾಜ್ಯದಲ್ಲಿ ತೀವ್ರ ಬರ ಇದ್ದು, ಈ ಕುರಿತು ಕೇಂದ್ರಕ್ಕೆ ಮನವರಿಕೆ ಮಾಡಿಕೊಡಬೇಕು ಎಂದು ಮನವಿ ಮಾಡಿದರು ಎಂದು ಗೊತ್ತಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry