ಬೆಳಗಾವಿ:  ‘ಕರ್ನಾಟಕ ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಅವರು ಸಂವಿಧಾನ ಬದ್ಧವಾಗಿ ನಡೆದುಕೊಳ್ಳುವುದನ್ನು ಬಿಟ್ಟು ರಾಜಕೀಯ ಪ್ರೇರಿತರಾಗಿ ವರ್ತಿಸುತ್ತಿದ್ದಾರೆ. ಅವರು ರಾಜಕೀಯದಿಂದ ಹೊರಬರಬೇಕು’ ಎಂದು ಬಿಜೆಪಿಯ ಹಿರಿಯ ಮುಖಂಡ ಅರುಣ್ ಜೇಟ್ಲಿ ಶನಿವಾರ ಇಲ್ಲಿ ಮನವಿ ಮಾಡಿಕೊಂಡರು.

ಕೆಎಲ್ಇ ಸಂಸ್ಥೆಯ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಅವರು ಸುದ್ದಿಗಾರರ ಜತೆಗೆ ಮಾತನಾಡಿದರು.

‘ರಾಜ್ಯದಲ್ಲಿ ನಡೆದಿದೆ ಎನ್ನಲಾದ ಭೂಹಗರಣದ ತನಿಖೆಗೆ ಆದೇಶ ನೀಡಲಾಗಿದೆ. ಹೀಗಾಗಿ ಆ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ’ ಎಂದೂ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು ‘ಹಿಂದೂ ಸಂಘಟನೆಗಳ ವಿರುದ್ಧ ಹೇಳಿಕೆ ನೀಡಿರುವ ರಾಹುಲ್ ಗಾಂಧಿ ಅವರು ತಕ್ಷಣ ಕ್ಷಮೆಯಾಚಿಸಬೇಕು’ ಎಂದು ಆಗ್ರಹಿಸಿದರು. ‘2ಜಿ ಸ್ಪೆಕ್ಟ್ರಂ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಇದೇ 22ರಂದು ಕರ್ನಾಟಕ ಹೊರತುಪಡಿಸಿ ರಾಷ್ಟ್ರದಾದ್ಯಂತ ಪ್ರತಿಭಟನೆ ನಡೆಸಲಾಗುತ್ತದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.