ರಾಜ್ಯಪಾಲರ ಬೆಂಬಲ

7

ರಾಜ್ಯಪಾಲರ ಬೆಂಬಲ

Published:
Updated:

ಬೆಂಗಳೂರು: `ಕಾವೇರಿ ನದಿ ನೀರಿನ ವಿಚಾರವಾಗಿ ರಾಜ್ಯ ಸರ್ಕಾರ ಕೈಗೊಳ್ಳುವ ತೀರ್ಮಾನಗಳಿಗೆ ನನ್ನ ಸಂಪೂರ್ಣ ಬೆಂಬಲವಿದೆ~ ಎಂದು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಹೇಳಿದರು.ರಾಜಭವನದ ಗಾಜಿನಮನೆಯಲ್ಲಿ ಶುಕ್ರವಾರ ನಡೆದ ರಾಷ್ಟ್ರಪತಿಗಳ ಪೊಲೀಸ್ ಪದಕ ಪ್ರದಾನ ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಕಾವೇರಿ ನದಿ ನೀರು ಪ್ರಾಧಿಕಾರ ಹಾಗೂ ಸುಪ್ರೀಂಕೋರ್ಟ್‌ನ ನಿರ್ದೇಶನದಂತೆ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡುತ್ತಿದೆ. ಇದರಲ್ಲಿ ರಾಜ್ಯ ಸರ್ಕಾರದ ತಪ್ಪೇನೂ ಇಲ್ಲ. ಕಾವೇರಿ ನದಿ ನೀರಿನ ವಿಚಾರದಲ್ಲಿ ರಾಜ್ಯಸರ್ಕಾರದ ವಕೀಲರು ಸಮರ್ಥವಾಗಿ ವಾದ ಮಂಡಿಸಿಲ್ಲ ಎಂಬುದು ತಪ್ಪು ತಿಳಿವಳಿಕೆ. ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಮುಂದೆ ಯಾವುದೇ ನಿಲುವು ತೆಗೆದುಕೊಂಡರೂ ಅದಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ~ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry