ಬೆಂಗಳೂರು: ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರು ಸೋಮವಾರ ಬೆಳಿಗ್ಗೆ 11 ಗಂಟೆಗೆ ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡುವರು.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ನಡೆಯುತ್ತಿರುವ ಮೊದಲ ವಿಧಾನಮಂಡಲ ಅಧಿವೇಶನ ಇದು. ಈ ಕಾರಣದಿಂದ ರಾಜ್ಯಪಾಲ ಭಾರದ್ವಾಜ್ ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುವರು.

ಸರ್ಕಾರದ ಮುಂದಿನ ನಡೆ, ಗುರಿ, ಸವಾಲುಗಳು, ಆರ್ಥಿಕ ಸ್ಥಿತಿ ಮತ್ತಿತರ ವಿಷಯಗಳ ಕುರಿತು ರಾಜ್ಯಪಾಲರು ತಮ್ಮ ಭಾಷಣದಲ್ಲಿ ವಿಷಯ ಪ್ರಸ್ತಾಪಿಸುವ ಸಾಧ್ಯತೆ ಇದೆ.

ರಾಜ್ಯ ಸರ್ಕಾರ ರಾಜ್ಯಪಾಲರ ಭಾಷಣದಲ್ಲೇ ಕೆಲವು ಹೊಸ ಕಾರ್ಯಕ್ರಮಗಳನ್ನು ಪ್ರಕಟಿಸುವ ಸಾಧ್ಯತೆ ಇದೆ. ಈಗಾಗಲೇ ಘೋಷಿಸಿರುವ ಅಗ್ಗದ ದರದಲ್ಲಿ ಅಕ್ಕಿ ವಿತರಣೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಗಳ ಸಾಲ ಮನ್ನಾ, ಹಾಲು ಉತ್ಪಾದಕರಿಗೆ ನೀಡುವ ಪ್ರೋತ್ಸಾಹ ಧನ ಹೆಚ್ಚಳ ಯೋಜನೆಗಳ ವಿವರವನ್ನೂ ರಾಜ್ಯಪಾಲರು ಭಾಷಣದಲ್ಲಿ ಪ್ರಸ್ತಾಪಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯಪಾಲರ ಭಾಷಣ ಮುಗಿದ 15 ನಿಮಿಷಗಳ ಬಳಿಕ ಮತ್ತೆ ಸದನ ಸಮಾವೇಶಗೊಳ್ಳಲಿದೆ. ರಾಜ್ಯಪಾಲರ ಭಾಷಣದ ಪ್ರತಿಯ ಮಂಡನೆ ಮತ್ತು ಹಿಂದಿನ ಅಧಿವೇಶನದ ನಂತರ ರಾಜ್ಯಪಾಲರಿಂದ ಒಪ್ಪಿಗೆ ಪಡೆದ ಮಸೂದೆಗಳನ್ನು ಕುರಿತ ವರದಿ ಮಂಡನೆಯಾಗಲಿದೆ.

ನಂತರ ಕಲಾಪ ಮುಂದೂಡಲಾಗುತ್ತದೆ. ಮಂಗಳವಾರದಿಂದ ಶುಕ್ರವಾರದವರೆಗೂ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ.

ಐದು ದಿನಗಳ ಕಲಾಪದಲ್ಲಿ ಪ್ರಶ್ನೋತ್ತರ, ಶೂನ್ಯವೇಳೆ, ಗಮನ ಸೆಳೆಯುವ ಸೂಚನೆ ಮಂಡನೆಗೆ ಅವಕಾಶ ಇಲ್ಲ. ರಾಜ್ಯಪಾಲರ ಭಾಷಣ, ಚರ್ಚೆ ಮತ್ತು ವಂದನಾ ನಿರ್ಣಯ ಅಂಗೀಕಾರಕ್ಕಷ್ಟೇ ಕಲಾಪ ಸೀಮಿತವಾಗಲಿದೆ. ಆದರೂ, ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯ ಸಂದರ್ಭದಲ್ಲೇ ಕೆಲವು ವಿಷಯಗಳನ್ನು ಪ್ರಸ್ತಾಪಿಸಿ ಸರ್ಕಾರದ ಮೇಲೆ ವಾಗ್ದಾಳಿ ನಡೆಸಲು ಪ್ರತಿಪಕ್ಷಗಳು ಸಿದ್ಧತೆಯನ್ನು ನಡೆಸಿವೆ.

ಅಗ್ಗದ ದರದಲ್ಲಿ ಮದ್ಯ ಒದಗಿಸುವ ಯೋಚನೆ, ಅಗ್ಗದ ದರದಲ್ಲಿ ಅಕ್ಕಿ ವಿತರಿಸುವ ಯೋಜನೆ ಅನುಷ್ಠಾನ ಮುಂದೂಡಿರುವುದು, ಗುಟ್ಕಾ ನಿಷೇಧ ಮತ್ತಿತರ ವಿಷಯಗಳನ್ನು ಸದನದಲ್ಲಿ ಪ್ರಸ್ತಾಪಿಸಲು ಜೆಡಿಎಸ್ ಮತ್ತು ಬಿಜೆಪಿ ಮುಂದಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.