ರಾಜ್ಯಮಟ್ಟಕ್ಕೆ 36 ಕರಾಟೆಪಟುಗಳ ಆಯ್ಕೆ

7

ರಾಜ್ಯಮಟ್ಟಕ್ಕೆ 36 ಕರಾಟೆಪಟುಗಳ ಆಯ್ಕೆ

Published:
Updated:

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲಾ ಸ್ಟೋರ್ಟ್ಸ್ ಕರಾಟೆ ಅಸೋಸಿಯೇಷನ್ ವತಿಯಿಂದ ಭಾನುವಾರ ನಗರದ ನಂದಿ ರಂಗಮಂದಿರದ ಆವರಣದಲ್ಲಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ ನಡೆಯಿತು. ಕಿರಿಯರು ಮತ್ತು ಹಿರಿಯರು ಸೇರಿದಂತೆ ಒಟ್ಟು 100 ಮಂದಿ ಕರಾಟೆ ಪಟುಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಅವರಲ್ಲಿ 36 ಮಂದಿ ರಾಜ್ಯಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾದರು.ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಬಾಗೇಪಲ್ಲಿಯ ಅಂತಿಮ ವರ್ಷದ ಡಿಪ್ಲೊಮಾ ವಿದ್ಯಾರ್ಥಿನಿ ಎ.ನಶ್ರಾ ಸುಲ್ತಾನಾ ಅವರು ಜಾರ್ಖಂಡನ ರಾಂಚಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಆಯ್ಕೆಯಾಗಿದ್ದಾರೆ. ಸ್ಪರ್ಧೆಯು ಇದೇ ತಿಂಗಳ 12ರಿಂದ 27ರವರೆಗೆ ನಡೆಯಲಿದೆ.‘ನಂದಿ ರಂಗಮಂದಿರದ ಆವರಣದಲ್ಲಿ ವಿವಿಧ ಬೆಲ್ಟ್‌ಗಳಿಗೆ ಸ್ಪರ್ಧೆ ನಡೆಸಲಾಯಿತು. ಮಕ್ಕಳು ಸೇರಿದಂತೆ ಹಿರಿಯರು ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿದರು. ಅತ್ಯುತ್ತಮ ಪ್ರದರ್ಶನ ನೀಡಿದ 36 ಕರಾಟೆಪಟುಗಳು ಬೆಂಗಳೂರಿನಲ್ಲಿ ಮಾರ್ಚ್‌ನಲ್ಲಿ ನಡೆಯಲಿರುವ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಸ್ಟೋರ್ಟ್ಸ್ ಕರಾಟೆ ಅಸೋಸಿಯೇಷನ್ ಅಧ್ಯಕ್ಷ ಅಲ್ತಾಫ್ ‘ಪ್ರಜಾವಾಣಿ’ಗೆ ತಿಳಿಸಿದರು.ಇತ್ತೀಚಿನ ದಿನಗಳಲ್ಲಿ ಕರಾಟೆಯತ್ತ ಮಕ್ಕಳು ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ. ಚಿಕ್ಕ ವಯಸ್ಸಿನಲ್ಲೇ ತರಬೇತಿಯನ್ನು ಪಡೆದು ಪರಿಣತಿ ಗಳಿಸಲು ಪ್ರಯತ್ನಿಸುತ್ತಿದ್ದಾರೆ. ಕರಾಟೆಗೆ ಹೆಚ್ಚಿನ ಪ್ರೋತ್ಸಾಹ ಸಿಕ್ಕಿದ್ದಲ್ಲಿ, ಮಕ್ಕಳಲ್ಲಿನ ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿದೆ’ ಎಂದು ಅವರ ಹೇಳಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry