ಭಾನುವಾರ, ಮೇ 9, 2021
24 °C

ರಾಜ್ಯಮಟ್ಟದ ಎಂಜಿನಿಯರ್‌ಗಳ ಸಮಾವೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸರ್.ಎಂ.ವಿಶ್ವೇಶ್ವರಯ್ಯ ಅವರ 151ನೇ ಜನ್ಮದಿನದ ಪ್ರಯುಕ್ತ ಕರ್ನಾಟಕ ಎಂಜಿನಿಯರ್‌ಗಳ ಸಂಘ ಮತ್ತು ಕರ್ನಾಟಕ ಎಂಜಿನಿಯರ್‌ಗಳ ಸೇವಾ ಸಂಘವು ಸೆ.15-16ರಂದು ಮೈಸೂರಿನಲ್ಲಿ ಎರಡು ದಿನಗಳ `ರಾಜ್ಯಮಟ್ಟದ ಎಂಜಿನಿಯರ್‌ಗಳ~ ಸಮಾವೇಶ ಮತ್ತು ತಾಂತ್ರಿಕ ಕಾರ್ಯಾಗಾರವನ್ನು ಏರ್ಪಡಿಸಿದೆ.ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ `ಕರ್ನಾಟಕ ಎಂಜಿನಿಯರ್‌ಗಳ ಸಂಘ~ದ ರಾಜ್ಯ ಅಧ್ಯಕ್ಷ ಎಂ.ನಾಗರಾಜ್, `ವಿಶ್ವೇಶ್ವರಯ್ಯ ಅವರು 1910-12ರ ಅವಧಿಯಲ್ಲಿ ಅಂದಿನ ಮೈಸೂರು ಎಂಜಿನಿಯರ್‌ಗಳ ಸಂಘದ ಅಧ್ಯಕ್ಷರಾಗಿದ್ದರು.ಅವರು ಅಧ್ಯಕ್ಷರಾಗಿದ್ದಾಗ ಸಂಘವು ತಾಂತ್ರಿಕ ವಿಷಯಗಳ ಕುರಿತು ವಿಚಾರ ಸಂಕಿರಣಗಳನ್ನು ಏರ್ಪಡಿಸಬೇಕು ಎಂದು ಯೋಜಿಸಿದ್ದರು. ಅವರು ಹೇಳಿದ್ದ ಈ ಅಂಶವನ್ನು ಗಮನದಲ್ಲಿ ಇಟ್ಟುಕೊಂಡು ಈ ಸಮಾವೇಶ ಏರ್ಪಡಿಸಲಾಗಿದೆ~ ಎಂದರು.`ಮೈಸೂರು ವಿವಿ ಸೆನೆಟ್ ಆವರಣದಲ್ಲಿ ನಡೆಯಲಿರುವ ಈ ಸಮಾವೇಶವನ್ನು ಸೆ.15ರಂದು ಬೆಳಿಗ್ಗೆ 10.45ಕ್ಕೆ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಉದ್ಘಾಟಿಸುವರು. ಸಚಿವರಾದ ಸಿ.ಎಂ.ಉದಾಸಿ, ಬಸವರಾಜ ಬೊಮ್ಮಾಯಿ, ಎಸ್.ಎ.ರಾಮದಾಸ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತಿತರರು ಭಾಗವಹಿಸಲಿದ್ದಾರೆ~ ಎಂದು ಹೇಳಿದರು.`ಲೋಕೋಪಯೋಗಿ, ಜಲಸಂಪನ್ಮೂಲ, ಸಣ್ಣ ನೀರಾವರಿ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆಗಳ ಎರಡು ಸಾವಿರಕ್ಕೂ ಅಧಿಕ ಎಂಜಿನಿಯರ್‌ಗಳು ಭಾಗವಹಿಸುವರು~ ಎಂದು ನಾಗರಾಜ್ ತಿಳಿಸಿದರು.ಕರ್ನಾಟಕ ಎಂಜಿನಿಯರ್‌ಗಳ ಸಂಘದ ಪ್ರಧಾನ ಕಾರ್ಯದರ್ಶಿ ಎ.ಎಂ.ಶಿವಶಂಕರ್, ಕರ್ನಾಟಕ ಎಂಜಿನಿಯರ್‌ಗಳ ಸೇವಾ ಸಂಘದ ಅಧ್ಯಕ್ಷ ಬಿ.ಪಿತಾಂಬರಸ್ವಾಮಿ, ಪ್ರಧಾನ ಕಾರ್ಯದರ್ಶಿ ವಿ.ಬಿ.ಕಲಕೇರಿ ಗೋಷ್ಠಿಯಲ್ಲಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.