ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸುವ ಸಂಬಂಧ ಹೈಕಮಾಂಡ್ ಜೊತೆ ಚರ್ಚಿಸಲು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಶುಕ್ರವಾರ ದೆಹಲಿಗೆ ತೆರಳುವರು.

ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದರೂ ಒಂದು ಸ್ಥಾನವನ್ನು ಸುಲಭವಾಗಿ ಪಡೆಯಲು ಕಾಂಗ್ರೆಸ್ಗೆ ಅವಕಾಶವಿದೆ. ಜೆಡಿಎಸ್ ಬೆಂಬಲ ದೊರತೆರೆ ಎರಡನೇ ಸ್ಥಾನ ಪಡೆಯಲು ಸಾಧ್ಯ. ಲಭ್ಯವಿರುವ ಒಂದು ಸ್ಥಾನಕ್ಕೆ ಹೆಸರನ್ನು ಅಂತಿಮಗೊಳಿಸುವುದು, ಜೆಡಿಎಸ್ ಬೆಂಬಲ ಪಡೆಯುವ ಸಾಧ್ಯತೆ ಬಗ್ಗೆ ಚರ್ಚಿಸಲಿದ್ದಾರೆ.

ರಾಜ್ಯಸಭೆಯ ಉಪ ಸಭಾಪತಿ ಕೆ.ರೆಹಮಾನ್ ಖಾನ್, ಸಿ.ಕೆ.ಜಾಫರ್ ಷರೀಫ್, ಸಿ.ಎಂ.ಇಬ್ರಾಹಿಂ, ಬಿ.ಕೆ.ಹರಿಪ್ರಸಾದ್ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.

ಇಂದು ಬಿಜೆಪಿ ಸಭೆ: ಪಕ್ಷದ ಅಭ್ಯರ್ಥಿಗಳ ಆಯ್ಕೆ ಸಂಬಂಧ ಬಿಜೆಪಿಯ ಹಿರಿಯ ಮುಖಂಡರು ಶುಕ್ರವಾರ ದೆಹಲಿಯಲ್ಲಿ ಸಭೆ ಸೇರಿ ಚರ್ಚೆ ನಡೆಸಲಿದ್ದಾರೆ. ನಾಮಪತ್ರ ಸಲ್ಲಿಕೆಗೆ ಸೋಮವಾರ ಕಡೆಯ ದಿನವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.