ಮಂಗಳವಾರ, ಮಾರ್ಚ್ 2, 2021
29 °C
ಒಂದು ದೇಶ, ಒಂದು ತೆರಿಗೆ

ರಾಜ್ಯಸಭೆ: ಕೊನೆಗೂ ಜಿಎಸ್‌ಟಿಗೆ ಒಪ್ಪಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜ್ಯಸಭೆ: ಕೊನೆಗೂ ಜಿಎಸ್‌ಟಿಗೆ ಒಪ್ಪಿಗೆ

ನವದೆಹಲಿ: ಸುದೀರ್ಘ ಚರ್ಚೆಯ ಬಳಿಕ ರಾಜ್ಯಸಭೆಯಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮಸೂದೆ ಬುಧವಾರ ಅಂಗೀಕರವಾಗಿದೆ.ರಾಜ್ಯಸಭೆಯಲ್ಲಿ ಇಂದು ರಾತ್ರಿ 9 ಗಂಟೆವರೆಗೂ  ಸುದೀರ್ಘ ಚರ್ಚೆ ನಡೆಯಿತು. ವಿರೋಧ ಪಕ್ಷಗಳು ಸೂಚಿಸಿದ ಕೆಲವು ತಿದ್ದುಪಡಿಗಳನ್ನು ಸರ್ಕಾರ ಒಪ್ಪಿಕೊಂಡಿದ್ದರಿಂದ ಮಸೂದೆಗೆ ಅಂಗೀಕಾರ ದೊರೆಯಿತು.ಸ್ವಾತಂತ್ರ್ಯ ಬಂದ ನಂತರ ಒಂದು ಮಸೂದೆಗಾಗಿ ಸಂಸತ್ತಿನಲ್ಲಿ ನಡೆದ ಸುದೀರ್ಘ ಚರ್ಚೆ ಇದಾಗಿದೆ.ಶೇ 1ರಷ್ಟು ಹೆಚ್ಚುವರಿ ತೆರಿಗೆಯನ್ನು ಕೈಬಿಡುವುದು ಮತ್ತು ಜಿಎಸ್‌ಟಿ ಜಾರಿಗೆ ಬಂದ ನಂತರದ ಐದು ವರ್ಷಗಳ ಕಾಲ ರಾಜ್ಯಗಳಿಗೆ ಉಂಟಾಗುವ ವರಮಾನ ನಷ್ಟಕ್ಕೆ ಕೇಂದ್ರದಿಂದ ಪರಿಹಾರ ನೀಡುವುದು ಸೇರಿದಂತೆ ಹಲವು ತಿದ್ದುಪಡಿಗಳನ್ನು ಮಾಡಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.