ಸೋಮವಾರ, ಜೂಲೈ 6, 2020
28 °C

ರಾಜ್ಯಸಭೆ: ಹೇಮಾ ಮಾಲಿನಿ ಪ್ರಮಾಣ ವಚನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜ್ಯಸಭೆ: ಹೇಮಾ ಮಾಲಿನಿ ಪ್ರಮಾಣ ವಚನ

ನವದೆಹಲಿ, (ಪಿಟಿಐ): ಕರ್ನಾಟಕದಿಂದ ರಾಜ್ಯಸಭೆಗೆ ಬಿಜೆಪಿ ಪಕ್ಷದಿಂದ ಆಯ್ಕೆಯಾದ ಕನಸಿನ ಕನ್ಯೆ, ಬಾಲಿವುಡ್ ನಟಿ ಹೇಮಾ ಮಾಲಿನಿ ಮಂಗಳವಾರ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ ಅಂತರಾಷ್ಟ್ರೀಯ ಮಹಿಳಾ  ಮಹಿಳಾ ದಿನವನ್ನು ಅರ್ಥಪೂರ್ಣವಾಗಿ  ಆಚರಿಸಿದರು.63 ವರ್ಷದ ಹೇಮಾ, ಎರಡನೇ ಬಾರಿಗೆ ಮೇಲ್ಮನ ಪ್ರವೇಶಿದ್ದಾರೆ. ಈ ಹಿಂದೆ 2003 ರ ಆಗಸ್ಟ್ನಲ್ಲಿ ಮೊದಲ ಬಾರಿಗೆ ಆಯ್ಕೆಯಾಗಿದ್ದರು. ಆಗ ಸಂಸತ್ತಿನ ವಿವಿಧ ಸಮಿತಿಗಳಲ್ಲಿ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು. ಈ ಬಾರಿ ಕರ್ನಾಟಕಕ್ಕೆ ಆಗಾಗ ಭೇಟಿ ನೀಡಿ ಮಹಿಳೆ, ಮಕ್ಕಳು , ರೈತರು ಹಾಗು ಬಡವರ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಮಾ ಭರವಸೆ ನೀಡಿದರು. ಹೇಮಮಾಲಿನಿ ಹಿಂದಿ ಚಿತ್ರರಂಗದಲ್ಲಿ ಇದುವರೆಗೂ 200 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇವರು ನಟಿಸಿದ ಬಾಗ್ಬಾನ್, ಶೋಲೆ ಬಾಕ್ಸ್ ಆಫೀಸ್ ನಲ್ಲಿ ಹಿಟ್ ಚಿತ್ರಗಳು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.