ಶುಕ್ರವಾರ, ಜೂನ್ 18, 2021
27 °C

ರಾಜ್ಯಸಭೆ: 19ರ ವರೆಗೆನಾಮಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇದೇ 30ರಂದು ನಡೆಯುವ ಚುನಾವಣೆಗೆ ಸೋಮವಾರ ಅಧಿಸೂಚನೆ ಹೊರಡಿಸುವುದರೊಂದಿಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ.

ಚುನಾವಣಾಧಿಕಾರಿಯಾದ ವಿಧಾನ ಸಭೆಯ ಕಾರ್ಯದರ್ಶಿ ಓಂಪ್ರಕಾಶ್ ಅವರು ರಾಜ್ಯಸಭಾ ಚುನಾವಣೆಯ ಅಧಿಸೂಚನೆ ಹೊರಡಿಸಿದ್ದು, ಇದೇ 19ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಇದೆ.

ರಾಜ್ಯಸಭೆಯ ಉಪ ಸಭಾಪತಿಯಾಗಿರುವ ಕೆ.ರೆಹಮಾನ್ ಖಾನ್ ಅವರಿಗೆ ಮತ್ತೆ ಟಿಕೆಟ್ ನೀಡುವ ಸಾಧ್ಯತೆಗಳಿವೆ. ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಅವರನ್ನೇ ಮುಂದುವರಿಸಲು ಕಾಂಗ್ರೆಸ್ ಹೈಕಮಾಂಡ್ ಒಲವು ತೋರಿದೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿಗೆ ಎರಡು ಸ್ಥಾನಗಳು ದೊರೆಯಲಿದ್ದು, ಒಂದು ಸ್ಥಾನಕ್ಕೆ ಈಗ ನಿವೃತ್ತಿ ಹೊಂದುತ್ತಿರುವ ಶಾಣಪ್ಪ ಅವರನ್ನೇ ಮುಂದುವರಿಸುವ ಸಾಧ್ಯತೆಗಳಿವೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಬಹಿರಂಗ ಪ್ರಚಾರ ಇದೇ 16ರಂದು ಮುಕ್ತಾಯವಾಗಲಿದೆ. ಇದಾದ ನಂತರ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಎನ್ನಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.