ರಾಜ್ಯ ಅಥ್ಲೆಟಿಕ್ ಚಾಂಪಿಯನ್‌ಷಿಪ್ ಇಂದಿನಿಂದ

7

ರಾಜ್ಯ ಅಥ್ಲೆಟಿಕ್ ಚಾಂಪಿಯನ್‌ಷಿಪ್ ಇಂದಿನಿಂದ

Published:
Updated:

ಉಡುಪಿ: ಇಲ್ಲಿನ ಅಜ್ಜರಕಾಡು ಮಹಾತ್ಮಾ ಗಾಂಧಿ ಮೈದಾನದಲ್ಲಿ ಕಾರ್ಪೊರೇಷನ್ ಬ್ಯಾಂಕ್ ಪ್ರಾಯೋಜಿತ  28ನೇ ರಾಜ್ಯ ಜೂನಿಯರ್ ಮತ್ತು ಸೀನಿಯರ್ ಅಥ್ಲೆಟಿಕ್ ಚಾಂಪಿಯನ್‌ಷಿಪ್‌ನ ಸ್ಪರ್ಧೆಗಳು ಶುಕ್ರವಾರ ಆರಂಭವಾಗಲಿವೆ. ಕೂಟವನ್ನು ಗುರುವಾರ ಸಂಜೆ ಮಹಾತ್ಮ ಗಾಂಧಿ ಮೈದಾನದಲ್ಲಿ ಉದ್ಘಾಟಿಸಲಾಯಿತು.

ಕ್ರೀಡಾಕೂಟಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಎಸ್. ಆಚಾರ್ಯ ಚಾಲನೆ ನೀಡಿದರು.

ಉಡುಪಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ಈ ಕೂಟದಲ್ಲಿ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಬೆಂಗಳೂರು, ಎಂಇಜಿ, ಭಾರತ ಕ್ರೀಡಾ ಪ್ರಾಧಿಕಾರ, ಕೊಡಗು, ಮೈಸೂರು, ಬಾಗಲಕೋಟೆ, ಶಿವಮೊಗ್ಗ, ವಿಜಾಪುರ, ಉಡುಪಿ ಸೇರಿದಂತೆ ವಿವಿಧ ಜಿಲ್ಲೆಗಳ ಸುಮಾರು 1,500 ಕ್ರೀಡಾಪಟುಗಳು ಪಾಲ್ಗೊಳ್ಳುತ್ತಿದ್ದಾರೆ.

ಶುಕ್ರವಾರದಿಂದ ಮೂರು ದಿನ- ಒಟ್ಟು ನಾಲ್ಕು (14, 16, 18 ಮತ್ತು 20) ವಯೋವರ್ಗಗಳ ಬಾಲಕರು ಮತ್ತು ಬಾಲಕಿಯರ ವಿಭಾಗದಲ್ಲಿ ಹಾಗೂ ಪುರುಷರ ಮತ್ತು ಮಹಿಳೆಯರ ವಿಭಾಗದಲ್ಲಿ 240 ಸ್ಪರ್ಧೆಗಳು ನಡೆಯಲಿವೆ. ಈ ಕೂಟದ ನಂತರ ನವೆಂಬರ್ 1ರಿಂದ 4ರವರೆಗೆ ರಾಂಚಿಯಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ ಕೂಟಕ್ಕೆ ಕರ್ನಾಟಕ ತಂಡಗಳ ಆಯ್ಕೆ ನಡೆಯಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry