ಗುರುವಾರ , ಮೇ 6, 2021
26 °C

ರಾಜ್ಯ ಕಮಾಂಡೊ ಪಡೆಗೆ ತರಬೇತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ಭಯೋತ್ಪಾದನಾ ನಿಗ್ರಹ ಕಮಾಂಡೋ ಪಡೆ ಮತ್ತು ಗುಪ್ತಚರ ವಿಭಾಗದ ಪೊಲೀಸರಿಗೆ ಇಸ್ರೇಲ್ ಪಡೆಗಳಿಂದ ಉನ್ನತ ಮಟ್ಟದ ತರಬೇತಿ ಕೊಡಿಸಲು ಸರ್ಕಾರ ಯೋಚಿಸಿದ್ದು, ಈ ಸಂಬಂಧ ಭಾರತದಲ್ಲಿನ ಇಸ್ರೇಲ್ ರಾಯಭಾರಿ ಜೊತೆ ಚರ್ಚೆ ನಡೆಸಲಾಗಿದೆ ಎಂದು ಗೃಹ ಸಚಿವ ಆರ್.ಅಶೋಕ ತಿಳಿಸಿದರು.ಬೆಂಗಳೂರಿನಲ್ಲಿ ಇಸ್ರೇಲ್ ಕಾನ್ಸುಲೇಟ್ ಜನರಲ್ ಕಚೇರಿ ಆರಂಭಿಸುವ ಹಿನ್ನೆಲೆಯಲ್ಲಿ ನಗರಕ್ಕೆ ಆಗಮಿಸಿರುವ ಭಾರತದಲ್ಲಿನ ಇಸ್ರೇಲ್ ರಾಯಭಾರಿ ಅಲೋನ ಅಷ್ಫಿಜ್ ಬುಧವಾರ ವಿಧಾನಸೌಧದಲ್ಲಿ ಅಶೋಕ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.ಬಳಿಕ ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡಿದ ಸಚಿವರು, `ಭಯೋತ್ಪಾದನೆ ನಿಗ್ರಹ ಕುರಿತು ರಾಜ್ಯದ ಪೊಲೀಸರಿಗೆ ತರಬೇತಿ ನೀಡುವ ಕೋರಿಕೆ ಬಗ್ಗೆ ಇಸ್ರೇಲ್ ರಾಯಭಾರಿಯಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ~ ಎಂದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.