ಗುರುವಾರ , ಮೇ 6, 2021
31 °C

ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು : 2010-2011ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು ಜೀವಮಾನದ ಸಾಧನೆಗಾಗಿ ನಟ ಎಸ್.ಶಿವರಾಂ ಅವರಿಗೆ ಡಾ. ರಾಜಕುಮಾರ್ ಪ್ರಶಸ್ತಿ, ನಿರ್ದೇಶಕ ಭಾರ್ಗವ ಅವರಿಗೆ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ನೀಡಲಾಗಿದೆ. ವಿಷ್ಣುವರ್ಧನ್ ಪ್ರಶಸ್ತಿಗೆ ನಟ ಅಂಬರೀಷ್ ಆಯ್ಕೆಯಾಗಿದ್ದಾರೆ.ಆಯ್ಕೆ ಸಮಿತಿ ಅಧ್ಯಕ್ಷೆ ಭಾರತಿ ವಿಷ್ಣುವರ್ಧನ್ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಡಿ.ವಿ.ಸದನಂದ ಗೌಡ ನಗರದಲ್ಲಿ ಗುರುವಾರ ಪ್ರಶಸ್ತಿಗಳನ್ನು ಪ್ರಕಟಿಸಿದರು.ಪ್ರಥಮ ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ರಾಕ್‌ಲೈನ್ ಪ್ರೊಡಕ್ಷನ್ಸ್ ನಿರ್ಮಾಣದ ಉಪೇಂದ್ರ ನಿರ್ದೇಶನದ `ಸೂಪರ್~ ಚಿತ್ರ ಆಯ್ಕೆಯಾಗಿದೆ. ಉಪೇಂದ್ರ ಅತ್ಯುತ್ತಮ ನಿರ್ದೇಶಕನಾಗಿ ಹೊರಹೊಮ್ಮಿದ್ದಾರೆ.   ಹಂಸಲೇಖ ಇಮೇಜಸ್ ಪ್ರೈ. ಲಿಮಿಟೆಡ್‌ನ `ಭಗವತಿಕಾಡು~ ಚಿತ್ರಕ್ಕೆ ದ್ವಿತೀಯ ಅತ್ಯುತ್ತಮ ಚಿತ್ರ ಪ್ರಶಸ್ತಿ ಲಭಿಸಿದೆ.  ರೇಣು ಡಿಜಿಟಲ್ ಸ್ಟುಡಿಯೊ ನಿರ್ಮಾಣದ ನಿರ್ದೇಶಕ ರೇಣುಕುಮಾರ್ ಅವರ ಶಬ್ದಮಣಿ ಚಿತ್ರಕ್ಕೆ ತೃತೀಯ ಅತ್ಯುತ್ತಮ ಚಿತ್ರ ಪ್ರಶಸ್ತಿ ಸಂದಿದೆ. ವಿಶೇಷ ಸಾಮಾಜಿಕ ಕಾಳಜಿಯ ಚಿತ್ರ ಶ್ರೀನಿವಾಸ್ ಕೌಶಿಕ್ ನಿರ್ದೇಶನದ `ತರಂಗಿಣಿ~. ಅತ್ಯುತ್ತಮ ಮಕ್ಕಳ ಚಿತ್ರ ಸಿ.ಲಕ್ಷ್ಮಣ್ ನಿರ್ದೇಶನದ `ನನ್ನ ಗೋಪಾಲ~.ಅತ್ಯುತ್ತಮ ನಟ ಪ್ರಶಸ್ತಿಗೆ ಪುನೀತ್‌ರಾಜ್‌ಕುಮಾರ್ (ಚಿತ್ರ: ಪೃಥ್ವಿ), ಅತ್ಯುತ್ತಮ ನಟಿ ಪ್ರಶಸ್ತಿಗೆ ಕಲ್ಯಾಣಿ (ಚಿತ್ರ: ಸೂಸೈಡ್) ಅವರನ್ನು ಆಯ್ಕೆಮಾಡಲಾಗಿದೆ. ಅತ್ಯುತ್ತಮ ಪೋಷಕ ನಟ ಪ್ರಶಸ್ತಿಗೆ ರಮೇಶ್ ಭಟ್ (ಚಿತ್ರ ಉಯ್ಯಾಲೆ),ಅತುತ್ತಮ ಪೋಷಕ ನಟಿ ಪ್ರಶಸ್ತಿಗೆ ವಿಜಯಲಕ್ಷ್ಮಿ ಸಿಂಗ್ (ಚಿತ್ರ: ವೀರ ಪರಂಪರೆ) ಪಾತ್ರರಾಗಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.