ಗುರುವಾರ , ಏಪ್ರಿಲ್ 22, 2021
29 °C

ರಾಜ್ಯ ಪ್ರವಾಸ: ಸದಾನಂದಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬರ ಅಧ್ಯಯನ ಮತ್ತು ಪಕ್ಷ ಸಂಘಟನೆ ಸಲುವಾಗಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ನೇತೃತ್ವದ ತಂಡ ಇದೇ 28ರಿಂದ ರಾಜ್ಯ ಪ್ರವಾಸ ಕೈಗೊಳ್ಳಲಿದೆ. ಈ ತಂಡ 28ರಂದು ಮೈಸೂರಿನಲ್ಲಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಪ್ರವಾಸ ಆರಂಭಿಸಲಿದೆ.ಗೌಡರ ಜತೆ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹಾಗೂ ಆ ಭಾಗದ ಸಚಿವರು, ಶಾಸಕರು, ಪಕ್ಷದ ಕಾರ್ಯಕರ್ತರು ಪ್ರವಾಸ ಸಂದರ್ಭದಲ್ಲಿ ಹಾಜರಿರುವರು. ಈ ತಂಡ ಇದೇ 29ರಂದು ರಾಮನಗರ, ಸೆ. 4ರಂದು ಕೊಡಗು ಹಾಗೂ ಸೆ.10ರಿಂದ 12ರವರೆಗೆ ಬೀದರ್, ಗುಲ್ಬರ್ಗ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದೆ. ಮೊದಲ ಹಂತದಲ್ಲಿ ಈ ಜಿಲ್ಲೆಗಳಿಗೆ ಭೇಟಿ ನೀಡುವ ತಂಡ ಎರಡನೇ ಹಂತದಲ್ಲಿ ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳಿಗೆ ತೆರಳಲಿದೆ ಎಂದು ಮೂಲಗಳು ತಿಳಿಸಿವೆ.ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತಕುಮಾರ್ ನೇತೃತ್ವದ ತಂಡದ ಪ್ರವಾಸ ವಿಳಂಬವಾಗುವ ಸಾಧ್ಯತೆ ಇದೆ. ಸಂಸತ್ ಅಧಿವೇಶನ ಈ ವಿಳಂಬಕ್ಕೆ ಕಾರಣ. ಒಂದೆರಡು ದಿನದಲ್ಲಿ ಈ ತಂಡದ ಪ್ರವಾಸ ವೇಳಾಪಟ್ಟಿ ಕೂಡ ಬಿಡುಗಡೆ ಆಗಲಿದೆ ಎಂದು ಗೊತ್ತಾಗಿದೆ. ಉಪಮುಖ್ಯಮಂತ್ರಿ ಆರ್.ಅಶೋಕ ಈ ತಂಡದೊಂದಿಗೆ ಪ್ರವಾಸ ಕೈಗೊಳ್ಳಲಿದ್ದಾರೆ. ಬಿಜೆಪಿಯ ಹಿರಿಯ ಮುಖಂಡ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಮತ್ತೊಂದು ತಂಡ ಮಂಗಳವಾರ ಪ್ರವಾಸ ಆರಂಭಿಸಿದೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.