ಶುಕ್ರವಾರ, ಮೇ 27, 2022
21 °C

ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 ದೇವನಹಳ್ಳಿ: ಇಲ್ಲಿನ ಒಳಾಂಗಣ ಕ್ರೀಡಾ ಸಂಘದ ವತಿಯಿಂದ ಇದೇ 26 ಮತ್ತು 27 ರಂದು ರಾಜ್ಯ ಮಟ್ಟದ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ನಡೆಯಲಿದೆ ಎಂದು ಕ್ರೀಡಾ ಸಂಘದ ಪ್ರಕಟಣೆ ತಿಳಿಸಿದೆ.ನಾಕೌಟ್ ಮಾದರಿಯಲ್ಲಿ ಪಂದ್ಯಗಳನ್ನು ನಡೆಸಲಾಗುವುದು. ಪ್ರಥಮ ಬಹುಮಾನ 10 ಸಾವಿರ ರೂಪಾಯಿ, ದ್ವಿತೀಯ ಬಹುಮಾನ 5ಸಾವಿರ, ತೃತೀಯ 2,500 ರೂಪಾಯಿ ಹಾಗೂ ಪಾರಿತೋಷಕ ನೀಡಲಾಗುವುದು.

  ಆಸಕ್ತರು ಇದೇ 24ರ ಒಳಗೆ ತಂಡದ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ 9880678063, 9535001303 ಮೊಬೈಲ್ ಸಂಖ್ಯೆ ಸಂಪರ್ಕಿಸುವಂತೆ ಕೋರಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.