ಗುರುವಾರ , ಆಗಸ್ಟ್ 5, 2021
21 °C

ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಲು ಸುಪ್ರೀಂ ನಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ನಿಗದಿತ ಕಾಲಮಿತಿಯೊಳಗೆ ಅದಿರು ಸಾಗಣೆ ಕುರಿತ ಅರ್ಜಿಗಳನ್ನು ವಿಲೇವಾರಿ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿತು.ಅದಿರು ರಫ್ತಿಗೆ ಅನುಮತಿ ನೀಡುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂಬ ರಾಜ್ಯ ಸರ್ಕಾರದ ಹೇಳಿಕೆ ಹಿನ್ನೆಲೆಯಲ್ಲಿ ನ್ಯಾ.ಆರ್.ವಿ. ರವೀಂದ್ರನ್ ಹಾಗೂ ನ್ಯಾ. ಎ. ಕೆ. ಪಟ್ನಾಯಕ್ ಅವರನ್ನೊಳಗೊಂಡ ಪೀಠ ಯಾವುದೇ ಆದೇಶ ನೀಡಲು ನಿರಾಕರಿಸಿತು.

ಅಕ್ರಮ ಗಣಿಗಾರಿಕೆ ತಡೆಯುವ ನಿಟ್ಟಿನಲ್ಲಿ ಜಾರಿಗೆ ತಂದಿರುವ ಹೊಸ ಗಣಿ ನೀತಿ ಅನ್ವಯ ಗಣಿ ಉದ್ಯಮಿಗಳ ಅದಿರು ರಫ್ತು ಅನುಮತಿ  ಅರ್ಜಿ ವಿಲೇವಾರಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರದ ವಕೀಲರಾದ ಅನಿತಾ ಶೆಣೈ ನ್ಯಾಯಾಲಯಕ್ಕೆ ತಿಳಿಸಿದರು.ಅರ್ಜಿದಾರರಾದ ಎಂಎಸ್‌ಪಿಎಲ್, ಸೆಸ ಗೋವಾ, ಎಸ್. ಬಿ. ಮಿನರೆಲ್ಸ್ ಮತ್ತಿತರ ಕಂಪೆನಿಗಳು ರಾಜ್ಯ ಸರ್ಕಾರ ರಫ್ತು ಅನುಮತಿ ನೀಡಲು ಅನಗತ್ಯ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿದರು. ಏಪ್ರಿಲ್ 5ರಂದು ನ್ಯಾಯಾಲಯ ಎರಡು ವಾರದೊಳಗೆ ರಫ್ತು ನಿಷೇಧ ಹಿಂದಕ್ಕೆ ಪಡೆಯುವಂತೆ ಸರ್ಕಾರಕ್ಕೆ ಸೂಚನೆ ನೀಡಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.