ಭಾನುವಾರ, ಏಪ್ರಿಲ್ 11, 2021
32 °C

ರಾಣಿ ಚನ್ನಮ್ಮ ವಸತಿಶಾಲೆ ಶೀಘ್ರ ಲೋಕಾರ್ಪಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚನ್ನಗಿರಿ:  ತಾಲ್ಲೂಕು ಕಾಕನೂರು ಗ್ರಾಮದ ಹೊರವಲಯದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿಶಾಲೆ ಕಾಮಗಾರಿ ಭರದಿಂದ ಸಾಗಿದ್ದು, ಆರು ತಿಂಗಳಲ್ಲಿ ಲೋಕಾರ್ಪಣೆಯಾಗಲು ಸಿದ್ಧತೆ ನಡೆದಿದೆ.ಈ ವಸತಿಶಾಲೆಗೆ ತನ್ನದೇ ಆದ ಸ್ವಂತ ಕಟ್ಟಡ ಇದುವರೆಗೆ ಇರಲಿಲ್ಲ. ಇದನ್ನು ಮನಗಂಡು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸಮಾಜ ಕಲ್ಯಾಣ ಇಲಾಖೆಯಿಂದ ವಸತಿ ಶಾಲೆ ನಿರ್ಮಾಣಕ್ಕೆ ್ಙ 4.85 ಕೋಟಿ ಅನುದಾನವನ್ನು ಬಿಡುಗಡೆ ಮಾಡಿಸಿದ್ದರು.ಆದರೆ, ಚನ್ನಗಿರಿ ಪಟ್ಟಣದಲ್ಲಿ ಈ ವಸತಿಶಾಲೆ ನಿರ್ಮಿಸಲು ಅಗತ್ಯವಾದ ವಿಶಾಲವಾದ ಜಾಗ ಸಿಗಲಿಲ್ಲ. ಈ ಕಾರಣದಿಂದ ಪಟ್ಟಣದಿಂದ 15 ಕಿ.ಮೀ. ದೂರದ ಕಾಕನೂರು ಗ್ರಾಮದ ಹೊರವಲಯದಲ್ಲಿ ನಿರ್ಮಿಸಲು ತೀರ್ಮಾನಿಸಲಾಯಿತು. ಈ ಗ್ರಾಮದಲ್ಲಿದ್ದ ಕಂದಾಯ ಇಲಾಖೆಗೆ ಸೇರಿದ 10 ಎಕರೆ ಜಾಗದಲ್ಲಿ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಕಳೆದ ಒಂದೂವರೆ ವರ್ಷದ ಹಿಂದೆ ಅಂದಿನ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರು ಶಂಕುಸ್ಥಾಪನೆ ಮಾಡಿ ಕಾಮಗಾರಿಗೆ ಅವರು ಚಾಲನೆ ನೀಡಿದರು.ವಸತಿಶಾಲೆಯ ಕಟ್ಟಡ ನಿರ್ಮಾಣ ಕಾರ್ಯ ನಡೆದಿದೆ. ಇದರಿಂದ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಈ ಪರಿಸರ ಅನುಕೂಲವಾಗಲಿದೆ. ಆರು ತಿಂಗಳಲ್ಲಿ ಕಾಮಗಾರಿ ಮುಕ್ತಾಯಗೊಳ್ಳಲಿದ್ದು, ನಂತರ ಇಲಾಖೆಯ ಸುಪರ್ದಿಗೆ ನೀಡಲಾಗುವುದು ಎಂದು ಗುತ್ತಿಗೆದಾರ ಕೊಂಡಾರೆಡ್ಡಿ ತಿಳಿಸಿದರು.ಕಲಿಕಾ ಆಸಕ್ತಿ ಮೂಡಿಸಿ

ಹೊನ್ನಾಳಿ: ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳಲ್ಲಿ ಕಲಿಕೆಯ ಬಗ್ಗೆ ಆಸಕ್ತಿ ಮೂಡಿಸಬೇಕು ಎಂದು ಸಿಡಿಪಿಒ ರಾಮಲಿಂಗಪ್ಪ ಅರಳಗುಪ್ಪಿ ಹೇಳಿದರು.ತಾಲ್ಲೂಕಿನ ಗೊಲ್ಲರಹಳ್ಳಿ ಗ್ರಾಮದಲ್ಲಿ ಈಚೆಗೆ ಮಕ್ಕಳ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡ ಮಕ್ಕಳ ಗ್ರಾಮಸಭೆ, ಬಾಲಮೇಳ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಮಾಸಡಿ ಗ್ರಾಮ ಪಂಚಾಯ್ತಿ ಸದಸ್ಯೆ ಕೆ.ಸಿ. ಸುಧಾ ಬಾಲಮೇಳ ಸಮಾರಂಭ ಉದ್ಘಾಟಿಸಿದರು.

ಡಾ.ಎನ್.ಎಚ್. ಗಿರೀಶ್, ಮಾಸಡಿ ಗ್ರಾಮ ಪಂಚಾಯ್ತಿ ಸದಸ್ಯ ಹಳದಪ್ಪ, ಅಂಗನವಾಡಿ ಮೇಲ್ವಿಚಾರಕಿ ಮಂಜುಳಾ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.