ಸೋಮವಾರ, ಏಪ್ರಿಲ್ 19, 2021
32 °C

ರಾಮೋಹಳ್ಳಿ: ಅದ್ದೂರಿ ಬ್ರಹ್ಮ ರಥೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮೋಹಳ್ಳಿ: ಅದ್ದೂರಿ ಬ್ರಹ್ಮ ರಥೋತ್ಸವ

ರಾಜರಾಜೇಶ್ವರಿ ನಗರ: ಬೆಂಗಳೂರು ದಕ್ಷಿಣ ತಾಲ್ಲೂಕು ರಾಮೋಹಳ್ಳಿಯಲ್ಲಿ ಇತಿಹಾಸ ಪ್ರಸಿದ್ದ ರಾಮಚಂದ್ರಸ್ವಾಮಿ ದೇವರ ಬ್ರಹ್ಮ ರಥೋತ್ಸವವು ಸಡಗರ, ಸಂಭ್ರಮದಿಂದ ಅದ್ಧೂರಿಯಾಗಿ ನೆರವೇರಿತು. ಸಾವಿರಾರು ಭಕ್ತರು ಇದಕ್ಕೆ ಸಾಕ್ಷಿಯಾಗಿದ್ದರು. ರಾಮಚಂದ್ರಸ್ವಾಮಿ, ಆಂಜನೇಯ, ಸೀತಾ, ಲಕ್ಷ್ಮಣ, ಭರತ, ಶತೃಘ್ನ ದೇವರುಗಳ ವಿಗ್ರಹಗಳನ್ನಿಟ್ಟು ಪೂಜೆ ಸಲ್ಲಿಸುವುದರ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.

 

ಸಚಿವೆ ಶೋಭಾ ಕರಂದ್ಲಾಜೆ, ಕರ್ನಾಟಕ ವಸತಿ ಮಹಾಮಂಡಳದ ಅಧ್ಯಕ್ಷ ಎಸ್.ಟಿ.ಸೋಮಶೇಖರ್, ದೇವಸ್ಥಾನ ಆಡಳಿತ ಮಂಡಳಿಯ ವಿ.ವೇಣುಗೋಪಾಲ್, ಆರ್.ಪಿ. ಸೋಮಶೇಖರ್, ಆರ್.ಪಿ. ಪ್ರಕಾಶ್, ಆರ್.ಎಂ.ವಿ.ಸ್ವಾಮಿ, ಶ್ರಿನಿವಾಸ ರೆಡ್ಡಿ, ಎಂ.ಕೃಷ್ಣಪ್ಪ, ವಿಜಯಲಕ್ಷ್ಮಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ವೆಂಕಟಮ್ಮ ರೇವಣಸಿದ್ದಯ್ಯ, ಜಿ.ಪಂ. ಸದಸ್ಯೆ ಸರ್ವಮಂಗಳ ಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.

 

ಭಕ್ತಾದಿಗಳು ಜಯಘೋಷದೊಂದಿಗೆ ರಥವನ್ನು ಎಳೆದು ಹೂವು, ಬಾಳೆಹಣ್ಣುಗಳನ್ನು ಎಸೆಯುವುದರ ಮೂಲಕ ಕುಣಿದು ಕುಪ್ಪಳಿಸಿದರು.ನಾಡಿನ ವಿವಿಧ ಜಾನಪದ ಕಲಾ ಉತ್ಸವಗಳು, ಪೂಜಾ ಕುಣಿತ, ಪಟ್ಟದ ಕುಣಿತ ಸೇರಿದಂತೆ ಹಲವು ಪ್ರದರ್ಶನಗಳು ಜನರ ಗಮನ ಸೆಳೆದವು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.