ಗುರುವಾರ , ಜೂಲೈ 2, 2020
22 °C

ರಾಯಚೂರು: ಬತ್ತ ಖರೀದಿ ಕೇಂದ್ರ ಉದ್ಘಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಬತ್ತ ಖರೀದಿ ಕೇಂದ್ರ ಉದ್ಘಾಟನೆ

ರಾಯಚೂರು: ಬತ್ತ ಖರೀದಿ ಕೇಂದ್ರಕ್ಕೆ ಬತ್ತ ಮಾರಾಟ ಮಾಡುವ ರೈತರಿಗೆ 24 ತಾಸಿನೊಳಗೆ ಹಣ ಪಾವತಿ ಮಾಡಬೇಕು. ಬತ್ತ ಖರೀದಿ ಕೇಂದ್ರ ಇರುವ ಕಡೆ ಬಿಲ್ ಪಾವತಿಗೆ ಬ್ಯಾಂಕ್‌ಗಳು ಕೌಂಟರ್ ಆರಂಭಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು  ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ ಶ್ರೀರಾಮುಲು ಹೇಳಿದರು.ಮಂಗಳವಾರ ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಬತ್ತ ಖರೀದಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.ಕೇಂದ್ರ ಸರ್ಕಾರ ಯಾವ ರೀತಿ ನಿಯಮ ರೂಪಿಸಿದೆಯೋ ಆ ಮಾದರಿಯಲ್ಲಿಯೇ ಬತ್ತ ಖರೀದಿ ಮಾಡಬೇಕಾಗುತ್ತದೆ.

 

ಸರ್ಕಾರ ಬತ್ತ ಖರೀದಿ ಕೇಂದ್ರ ಆರಂಭಿಸುವ ಘೋಷಣೆ ಮಾಡುತ್ತಿದ್ದಂತೆಯೇ ಮಾರುಕಟ್ಟೆಯಲ್ಲಿ ಬತ್ತದ ಬೆಲೆ ಹೆಚ್ಚಳವಾಗಿದೆ. ಇದರಿಂದಲೂ ರೈತರಿಗೆ ಸಹಾಯ ಆಗುತ್ತಿದೆ ಎಂದು ತಿಳಿಸಿದರು.ಶಾಸಕ ರಾಯಪ್ಪ ನಾಯಕ, ಜಿಲ್ಲಾಧಿಕಾರಿ ವಿ.ಅನ್ಬುಕುಮಾರ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಜಯಕುಮಾರ, ಎಪಿಎಂಸಿ ಕಾರ್ಯದರ್ಶಿ ಪುಟ್ಟಸ್ವಾಮಿ, ಆಹಾರ ಇಲಾಖೆ ಅಧಿಕಾರಿ ಗುರುರಾಜ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.