ಚೆನ್ನೈ (ಐಎಎನ್ಎಸ್): ಸತತ ಗೆಲುವಿನ ವಿಶ್ವಾಸದೊಂದಿಗೆ ಮುನ್ನುಗ್ಗಿರುವ ರಾಜಸ್ತಾನ್ ರಾಯಲ್ಸ್ಗೆ ಕಡಿವಾಣ ಹಾಕಲು ಚೆನ್ನೈ ಸೂಪರ್ ಕಿಂಗ್ಸ್ ಸಜ್ಜಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಟೂರ್ನಿಯ ಐದನೇ ಅವತರಣಿಕೆಯ ಲೀಗ್ ಪಂದ್ಯದಲ್ಲಿ ಶನಿವಾರ ಎದುರಾಗಲಿರುವ ರಾಹುಲ್ ದ್ರಾವಿಡ್ ನೇತೃತ್ವದ ರಾಯಲ್ಸ್ ಶಕ್ತಿಯನ್ನು ಮಹೇಂದ್ರ ಸಿಂಗ್ ದೋನಿ ಅರಿತಿದ್ದಾರೆ. ಆದ್ದರಿಂದಲೇ ತಮ್ಮ ತಂಡವು `ಸೂಪರ್~ ಶಕ್ತಿಯೊಂದಿಗೆ ಹೋರಾಟ ನಡೆಸುವುದು ಅಗತ್ಯ ಎನ್ನುವುದೂ ಅವರಿಗೆ ಗೊತ್ತು. ಆದ್ದರಿಂದಲೇ ಭಾರಿ ಸವಾಲಿನ ಪಂದ್ಯವಿದು ಎಂದು `ಮಹಿ~ ಸ್ಪಷ್ಟವಾಗಿ ಹೇಳಿದ್ದಾರೆ.

ರಾಜಸ್ತಾನ್ ರಾಯಲ್ಸ್ ತಂಡವು ಲೀಗ್ ಪಟ್ಟಿಯಲ್ಲಿ ಸದ್ಯ ಚೆನ್ನೈ ಸೂಪರ್ ಕಿಂಗ್ಸ್ಗಿಂತ ಎತ್ತರದಲ್ಲಿದೆ. ಆಡಿದ ಆರು ಪಂದ್ಯಗಳಲ್ಲಿ ನಾಲ್ಕರಲ್ಲಿ ವಿಜಯ ಸಾಧಿಸಿದೆ.
ಪಂದ್ಯ ಆರಂಭ: ಸಂಜೆ 4.00ಕ್ಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.