ಮಂಗಳವಾರ, ಜುಲೈ 14, 2020
25 °C

ರಾಷ್ಟ್ರಪತಿ ಭೇಟಿ: ತೆಲಂಗಾಣ ರಾಜ್ಯ ರಚನೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಷ್ಟ್ರಪತಿ ಭೇಟಿ: ತೆಲಂಗಾಣ ರಾಜ್ಯ ರಚನೆಗೆ ಆಗ್ರಹ

ನವದೆಹಲಿ (ಪಿಟಿಐ):ಆಂಧ್ರಪ್ರದೇಶದ ತೆಲಂಗಾಣ ಭಾಗದ ಶಾಸಕರು ಮತ್ತು ತೆಲುಗು ದೇಶಂ ಪಕ್ಷದ ನಾಯಕರನ್ನು ಒಳಗೊಂಡ ನಿಯೋಗವು ಬುಧವಾರ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರನ್ನು ಭೇಟಿ ಮಾಡಿ ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ರಾಷ್ಟ್ರಪತಿ ಭವನದಲ್ಲಿ ಪ್ರತಿಭಾ ಪಾಟೀಲ್ ಅವರನ್ನು  ಭೇಟಿ ಮಾಡಿದ ನಾಗಂ ಜನಾರ್ದನ ರೆಡ್ಡಿ ನೇತೃತ್ವದ ನಿಯೋಗವು ತೆಲಂಗಾಣ ಪರಿಸ್ಥಿತಿ ಬಗ್ಗೆ ಮನವರಿಕೆ ಮಾಡಿಕೊಟ್ಟಿತು. ಗೃಹ ಸಚಿವ ಪಿ. ಚಿದಂಬರಂ ಅವರು ನೀಡಿದ ಹೇಳಿಕೆಯ ಪ್ರಕಾರ ಕೇಂದ್ರ ಸರ್ಕಾರ ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾಗಿ ನಿಯೋಗದ ನಾಯಕರು ಹೇಳಿದರು. 2 ವರ್ಷಗಳ ಹಿಂದೆ  ರಾಷ್ಟ್ರಪತಿ ಅವರು ಮಾಡಿದ ಭಾಷಣದಲ್ಲೂ ಈ ವಿಷಯದ ಪ್ರಸ್ತಾವ ಇದೆ ಎಂಬುದನ್ನು ನಿಯೋಗವು ಗಮನಕ್ಕೆ ತಂದಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.