ಸೋಮವಾರ, ಅಕ್ಟೋಬರ್ 21, 2019
25 °C

ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರ: ಸರ್ಕಾರದ ಅಸ್ತು

Published:
Updated:

ನವದೆಹಲಿ (ಪಿಟಿಐ): ರಾಷ್ಟ್ರದಲ್ಲಿನ ಎಲ್ಲ ಭಯೋತ್ಪಾದನೆ ವಿರೋಧಿ ಚಟುವಟಿಕೆಗಳಿಗೆ ಮಧ್ಯವರ್ತಿ ಸಂಸ್ಥೆಯಾಗಿ (ನೋಡಾಲ್ ಏಜೆನ್ಸಿ) ಕೆಲಸ ಮಾಡುವಂತಹ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರ (ಎನ್ ಸಿ ಟಿ ಸಿ) ಸ್ಥಾಪನೆಗೆ ಕೇಂದ್ರ ಸರ್ಕಾರ ಶುಕ್ರವಾರ ಒಪ್ಪಿಗೆ ನೀಡಿತು.ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಭದ್ರತೆಗೆ ಸಂಬಂಧಿಸಿದ ಸಂಪುಟ ಸಮಿತಿಯು (ಸಿಸಿಎಸ್) ಒಂದು ಗಂಟೆಗೂ ಹೆಚ್ಚಿನ ಸುದೀರ್ಘ ಚರ್ಚೆಯ ಬಳಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರ ಸ್ಥಾಪನೆಗೆ ತನ್ನ ಒಪ್ಪಿಗೆ ನೀಡಿತು. ಈ ಕೇಂದ್ರವು ಭಯೋತ್ಪಾದನೆ ಸಂಬಂಧಿಸಿ ಜಾಗೃತಾ ಸಂಸ್ಥೆಗಳನ್ನು ಸುವ್ಯವಸ್ಥಿತವನ್ನಾಗಿ ಮಾಡಿ, ವಿಶ್ಲೇಷಿಸಿ ಸಂಬಂಧ ಪಟ್ಟ ಸಂಸ್ಥೆಗೆ ಕಾರ್ಯಯೋಜನೆಯನ್ನು ಒದಗಿಸುವುದು ಎಂದು ಅಧಿಕೃತ ಮೂಲಗಳು ತಿಳಿಸಿದವು.ಈ ಯೋಜನೆಯು ಗೃಹ ಸಚಿವ ಪಿ. ಚಿದಂಬರಂ ಅವರ ಪ್ರೀತಿಯ ಯೋಜನೆಯಾಗಿದ್ದು, ಇಂಟಲಿಜೆನ್ಸ್ ಬ್ಯೂರೋ (ಐಬಿ), ಸಂಶೋಧನೆ ಮತ್ತು ವಿಶ್ಲೇಷಣಾ ದಳ (ರಾ), ಜಂಟಿ ಜಾಗೃತಾ ಸಮಿತಿ (ಜೆಐಸಿ) ಮತ್ತು ರಾಜ್ಯ ಜಾಗೃತಾ ಸಂಸ್ಥೆಗಳಂತಹ ಜಾಗೃತಾ ಸಂಸ್ಥೆಗಳ ಭಯೋತ್ಪಾದನಾ ನಿಗ್ರಹ ಚಟುವಟಿಕೆಗಳನ್ನು ಸಮನ್ವಯಗೊಳಿಸುವ ~ಮಧ್ಯವರ್ತಿ ಸಂಸ್ಥೆ~ಯಾಗಿ ಕಾರ್ಯ ನಿರ್ವಹಿಸುವುದು.

 

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)