ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮರಗಳೇಕಿಲ್ಲ?

7

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮರಗಳೇಕಿಲ್ಲ?

Published:
Updated:

ರಾಷ್ಟ್ರೀಯ ಹೆದ್ದಾರಿ 4ನ್ನು ಚತುಷ್ಪಥ ಮಾರ್ಗವನ್ನಾಗಿ ಪರಿವರ್ತಿಸುವ ಸಂದರ್ಭದಲ್ಲಿ ನೂರಾರು ವರ್ಷಗಳಷ್ಟು ಹಳೆಯ, ಸಾವಿರಾರು ಮರಗಳನ್ನು ಕಡಿದುರುಳಿಸಲಾಗಿತ್ತು. ರಸ್ತೆ ನಿರ್ಮಾಣವಾಗುತ್ತಿದ್ದಂತೆಯೇ ಇಕ್ಕೆಲಗಳಲ್ಲಿ ಮರಗಳನ್ನು ಬೆಳೆಸುವುದಾಗಿ ಸಂಬಂಧಿಸಿದ ಇಲಾಖೆಯವರು ಜನಸಂಪರ್ಕ ಸಭೆಗಳಲ್ಲಿ ಭರವಸೆ ನೀಡಿದ್ದರು.

ರಸ್ತೆ ಕಾಮಗಾರಿ ಪೂರ್ಣಗೊಂಡು 5 ವರ್ಷಗಳಾಗುತ್ತ ಬಂದಿದ್ದರೂ ರಸ್ತೆ ಇಕ್ಕೆಲಗಳಲ್ಲಿ  ಒಂದೇ ಒಂದು ಮರವನ್ನು ಬೆಳೆಸಿಲ್ಲ. ರಸ್ತೆ ವಿಭಜಕದಲ್ಲಿ ಈಗಾಗಲೇ ಸಣ್ಣ ಪೊದೆಯಂತೆ ಬೆಳೆಯುವ ಗಿಡಗಳನ್ನು ನೆಟ್ಟು ಪೋಷಿಸಲಾಗುತ್ತಿದೆಯಷ್ಟೇ. ಮತ್ತೆ ಮರಗಳನ್ನು ಬೆಳೆಸುವ ತನ್ನ ಭರವಸೆಯಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಡೆದುಕೊಳ್ಳಲಿ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry