ರಾಷ್ಟ್ರ ಮಟ್ಟದ ವಿಚಾರಸಂಕಿರಣ 12ರಿಂದ

7

ರಾಷ್ಟ್ರ ಮಟ್ಟದ ವಿಚಾರಸಂಕಿರಣ 12ರಿಂದ

Published:
Updated:

ಯಾದಗಿರಿ: ಭಾರತೀಯ ಕಾರ್ಯನಿರತ ಪತ್ರಕರ್ತ ಒಕ್ಕೂಟದ ವತಿಯಿಂದ ರಾಷ್ಟ್ರಿಯ ಸಮ್ಮೇಳನವನ್ನು ಅ. 12 ಮತ್ತು 13 ರಂದು ತುಮಕೂರಿನ ಶ್ರೀದೇವಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ರಾಷ್ಟ್ರದ ವಿವಿಧೆಡೆಗಳಿಂದ 3ಸಾವಿರಕ್ಕೂ ಹೆಚ್ಚು ಪತ್ರಕರ್ತರು ಭಾಗವಹಿಸುವರು.ಸಮ್ಮೇಳನವನ್ನು ಮುಖ್ಯಮಂತ್ರಿ ಜಗದೀಶ ಶೆಟ್ಟರ ಉದ್ಘಾಟಿಸಲಿದ್ದು, ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ, ವಿವಿಧ ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ.ಭಾಗವಹಿಸಲು ಇಚ್ಛಿಸುವ ಜಿಲ್ಲೆಯ ಪತ್ರಕರ್ತರು ತಮ್ಮ ಹೆಸರನ್ನು ಅ. 5ರೊಳಗೆ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳ  ಬಳಿ ರೂ. 100 ಶುಲ್ಕದೊಂದಿಗೆ ನೋಂದಾಯಿಸಿಕೊಳ್ಳಬಹುದು ಎಂದು ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸಂಜೀವಕುಮಾರ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry