ನವದೆಹಲಿ (ಪಿಟಿಐ): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರೇ ಪಕ್ಷದ ಪ್ರಧಾನಿ ಅಭ್ಯರ್ಥಿ ಆಗಲಿದ್ದಾರೆ ಎಂದು ಕೇಂದ್ರ ಸಚಿವ ಬೇನಿ ಪ್ರಸಾದ್ ವರ್ಮ ಗುರುವಾರ ಹೇಳಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ಪ್ರಧಾನಿ ಅಭ್ಯರ್ಥಿಯಾಗಿ ನಂದನ್ ನಿಲೇಕಣಿ ಅವರು ಸ್ಪರ್ಧಿಸಲಿದ್ದಾರೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ನಮ್ಮ ಪ್ರಧಾನಿ ಆಗುವವರು ರಾಹುಲ್ ಗಾಂಧಿಯೇ ಹೊರತು ಬೇರೆ ಯಾರೂ ಅಲ್ಲ. ರಾಹುಲ್ ಅವರೇ ಪ್ರಧಾನಿ ಅಭ್ಯರ್ಥಿ’ ಎಂದು ಸ್ಪಷ್ಟಪಡಿಸಿದರು.

ನಂದನ್ ನಿಲೇಕಣಿ ಅವರು ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಎಂಬ ಊಹಾಪೋಹಗಳನ್ನು ಬುಧವಾರವೇ ಕಾಂಗ್ರೆಸ್ ನಿರಾಕರಿಸಿತ್ತು.
ಕಾಂಗ್ರೆಸ್ನ ಪ್ರಧಾನಿ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ ಅವರು ಆಯ್ಕೆಯಾಗಲಿದ್ದಾರೆಯೇ ಎಂಬ ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಈಚೆಗಷ್ಟೇ ಸುಳಿವು ನೀಡಿದ್ದರು ಎಂದು ಮೂಲಗಳು ತಿಳಿಸಿವೆ.

ನಿಲೇಕಣಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ, ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ದಕ್ಷಿಣ ಬೆಂಗಳೂರು ಸ್ಥಾನದಿಂದ ಸ್ಪರ್ಧಿಸುವರು ಎಂದು ಈ ಹಿಂದೆ ವರದಿಯಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.