ರೂರಲ್ ಆಯುರ್ವೇದ ಕಾಲೇಜು ಪ್ರಕರಣ: ಸೂಕ್ತ ಕ್ರಮಕ್ಕೆ ಆಗ್ರಹ

7

ರೂರಲ್ ಆಯುರ್ವೇದ ಕಾಲೇಜು ಪ್ರಕರಣ: ಸೂಕ್ತ ಕ್ರಮಕ್ಕೆ ಆಗ್ರಹ

Published:
Updated:

ಬೆಳಗಾವಿ: ರೂರಲ್ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸದಸ್ಯರು ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿಗೆ ಭೇಟಿ ಮಾಡಿ ಮನವಿ ಸಲ್ಲಿಸಿದರು.ವೈದ್ಯಕೀಯ ಶಿಕ್ಷಣ ಸಚಿವ ರಾಮದಾಸ ಅವರಿಗೆ ವಿದ್ಯಾರ್ಥಿಗಳನ್ನು ಜೂನ್ 2 ರಂದು ಭೇಟಿ ಮಾಡಿಸುವುದಾಗಿ ಭರವಸೆ ನೀಡಿದ ಸಚಿವರು, ರಾಜೀವಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕುಲಪತಿ ಅವರೊಂದಿಗೆ ಮಾತನಾಡುತ್ತೇನೆ ಎಂದರು.ಕಾಲೇಜಿನ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಏಕರೂಪ ಕೌರ್ ಅವರಿಗೆ ಸೂಚಿಸಿದರು.  ನಂತರ ಜಿಲ್ಲಾಧಿಕಾರಿ ಅವರಿಗೂ ಕಾರ್ಯಕರ್ತರು ಮನವಿ ಸಲ್ಲಿಸಿದರು.ಈ ಕುರಿತು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿಯೂ ಪ್ರಕರಣ ದಾಖಲಿಸಿದ್ದಾರೆ.

ದೂರವಾಣಿ ಮೂಲಕ ವೈದ್ಯಕೀಯ ಶಿಕ್ಷಣ ಸಚಿವ ರಾಮದಾಸ ಅವರ ಗಮನಕ್ಕೆ ವಿಷಯ ತಂದಾಗ, ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಎಬಿವಿಪಿ ನಗರ ಕಾರ್ಯದರ್ಶಿ ಶಿವಯೋಗಿ ಬೆಂಬಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಧರಣಿಯನ್ನು ಮುಂದುವರೆಸಿದ್ದು, ರಮೇಶ ಕೆ, ಮುರುಗೇಶ, ಮಾರುತಿ ಸುಣಗಾರ ಮತ್ತಿತರರು ಪಾಲ್ಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry