ನರಸಿಂಹರಾಜಪುರ: ತಾಲ್ಲೂಕಿನಾದ್ಯಂತ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಗುರುವಾರ ಹಲವು ಕಡೆ ಏಕಕಾಲದಲ್ಲಿ ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ₨1ಲಕ್ಷ ಮೊತ್ತದ ಮರಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ತಾಲ್ಲೂಕಿನಾದ್ಯಂತ ಹಲವು ಭಾಗಗಳಲ್ಲಿ ಮರಳುಗಾರಿಕೆ ಅಡೆ ತಡೆಯಿಲ್ಲದೆ ನಡೆಯುತ್ತಿದ್ದು ಕೆಲವು ಟ್ರಾಕ್ಟರ್ ಹೊಂದಿರುವವರು ಮರಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟು ಕೃತಕ ಅಭಾವ ಸೃಷ್ಟಿಸಿ ಪ್ರತಿ ಟ್ರಾಕ್ಟರ್ ಗೆ ₨1,800 ರಿಂದ ₨2ಸಾವಿರದ ಬೆಲೆ ನಿಗಧಿ ಮಾಡಿದ್ದರು. ಇದರಿಂದ ಆಶ್ರಯ ಮನೆ ನಿರ್ಮಿಸುವವರಿಗೆ, ಜನಸಾಮಾನ್ಯರಿಗೆ ಕಡಿಮೆ ಬೆಲೆಗೆ ಮರಳು ದೊರೆಯದೆ ಸಮಸ್ಯೆಯಾಗುತ್ತಿರುವ ಬಗ್ಗೆ ‘ಪ್ರಜಾವಾಣಿ’ 14 ಮೇ 2014ರ ಬುಧವಾರದ ಸಂಚಿಕೆಯಲ್ಲಿ ‘ಕಣ್ಮುಚ್ಚಿ ಕುಳಿತ ಜಿಲ್ಲಾಡಳಿತ ಮರಳು ಅಕ್ರಮ ಸಂಗ್ರಹ ಗಗನಕ್ಕೇರಿದ ಮರಳು ಬೆಲೆ!’ ಎಂಬ ಶೀರ್ಷಿಕೆಯಡಿ ವಿಸ್ತೃತ ವರದಿಯನ್ನು ಪ್ರಕಟಿಸಿತ್ತು.

ಈ ವರದಿಯಿಂದ ಎಚ್ಚೆತ್ತು ಕೊಂಡ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಮಹೇಶ್ ನೇತೃತ್ವದಲ್ಲಿ ತಾಲ್ಲೂಕಿನ ಶಿರಗಳಲೆ, ಲಿಂಗಾಪುರ, ಪಟ್ಟಣದ ವಿವಿದ ಪ್ರದೇಶಗಳು ಸೇರಿ ಸುಮಾರು 9 ಕಡೆ ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮರಳನ್ನು ವಶಕ್ಕೆ ತೆಗೆದು ಕೊಂಡು ದಂಡವನ್ನು ವಿಧಿಸಿದೆ. ಮರಳನ್ನು ಲೋಕೋಪಯೋಗಿ ಇಲಾಖೆಯ ವಶಕ್ಕೆ ಒಪ್ಪಿಸಲಾಗಿದೆ.

ದಾಳಿಯಲ್ಲಿ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ರವಿಚಂದ್ರ, ರೆವಿನ್ಯೂ ಇನ್ಸ್ ಪೆಕ್ಟರ್ ಶಾಮನಾಯಕ್, ಗ್ರಾಮ ಲೆಕ್ಕಾಧಿಕಾರಿಗಳಾದ ವಿಶ್ವನಾಥ್, ಸುನಿಲ್ ಭಾಗವಹಿಸಿದ್ದರು ಎಂದು ಮೂಲಗಳು ಸ್ಪಷ್ಟಪಡಿಸಿವೆ.

ದಾಳಿಯ ಸಂದರ್ಭದಲ್ಲಿ ಅರಣ್ಯ ಪ್ರದೇಶದಲ್ಲಿ ಭಾರಿ ಪ್ರಮಾಣದ ಮರಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟ ಅಂಶ ಕಂಡು ಬಂತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಪ್ರಜಾವಾಣಿಗೆ ತಿಳಿಸಿದ್ದಾರೆ. ವಶಕ್ಕೆ ತೆಗೆದು ಕೊಂಡಿರುವ ಮರಳನ್ನು ಶೀರ್ಘದಲ್ಲೆ ಹರಾಜು ಮಾಡಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಮೂಲಗಳು ತಿಳಿಸಿವೆ, ಜನಸಾಮಾನ್ಯರಿಗೆ ತೊಂದರೆಯಾಗುತ್ತಿರುವ ವಿಷಯದ ಬಗ್ಗೆ ವರದಿ ಪ್ರಕಟಿಸಿದ ‘ಪ್ರಜಾವಾಣಿ ’ಗೆ ಸಾರ್ವಜನಿಕರು ಅಭಿನಂದಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.