ರೂ 10 ಕೋಟಿ ಕಾಮಗಾರಿಗೆ ಅನುಮೋದನೆ

7

ರೂ 10 ಕೋಟಿ ಕಾಮಗಾರಿಗೆ ಅನುಮೋದನೆ

Published:
Updated:

ಹೊಸಕೋಟೆ: ತಾಲ್ಲೂಕಿನಲ್ಲಿ 10 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಪ್ರಸ್ತಾವಕ್ಕೆ ಸರ್ಕಾರ ಅನುಮೋದನೆ ನೀಡಿದೆ ಎಂದು ಪ್ರಾಧಿಕಾರದ ಅಧ್ಯಕ್ಷ ವಿ.ವಿಜಯ ಕುಮಾರ್ ತಿಳಿಸಿದರು.

`ಕಾಮಗಾರಿಗಳ ಪೈಕಿ ಕುಡಿಯುವ ನೀರು ಪೂರೈಕೆ ಮತ್ತು ರಸ್ತೆ ಅಭಿವೃದ್ಧಿ ಕಾರ್ಯಗಳಿಗೆ ಪ್ರಥಮ ಆದ್ಯತೆ ಕೊಡಲಾಗಿದೆ~ ಎಂದು ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

`ಪುರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗಾಗಿ 35 ಲಕ್ಷ ರೂಪಾಯಿ ವೆಚ್ಚ ಮಾಡಲಾಗುವುದು. ಹೋಬಳಿ ಕೇಂದ್ರವಾದ ನಂದಗುಡಿ ಗ್ರಾಮದ ನೀರಿನ ಸಮಸ್ಯೆ ಬಗೆಹರಿಸಲು ಒಂದು ಕೋಟಿ ರೂಪಾಯಿ ವೆಚ್ಚ ಮಾಡಲಾಗುವುದು. ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 7 ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ  ರೂ 47.50 ಲಕ್ಷ, ಶಿಥಿಲಾವಸ್ಥೆಯಲ್ಲಿರುವ ಕೆಜಿಕೆಎಂಎಸ್ ಶಾಲೆಗೆ ಹೊಸ ಕಟ್ಟಡ ನಿರ್ಮಿಸಲು ರೂ 68 ಲಕ್ಷ ವಿನಿಯೋಗಿಸಲಾಗುವುದು~ ಎಂದು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry