ರೂ 10 ಸಾವಿರ ವೇತನ ನಿಗದಿಗೆ ಆಗ್ರಹ

7
ವಿವಿಧೆಡೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಪ್ರತಿಭಟನೆ

ರೂ 10 ಸಾವಿರ ವೇತನ ನಿಗದಿಗೆ ಆಗ್ರಹ

Published:
Updated:
ರೂ 10 ಸಾವಿರ ವೇತನ ನಿಗದಿಗೆ ಆಗ್ರಹ

ಚನ್ನರಾಯಪಟ್ಟಣ: ತಿಂಗಳಿಗೆ ಕನಿಷ್ಠ ರೂ.10 ಸಾವಿರ ವೇತನ ನಿಗದಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆ ಯರು ಹಾಗೂ ಸಹಾಯಕಿಯರು ಗುರುವಾರ ಪ್ರತಿಭಟನೆ ನಡೆಸಿದರು.ಪಟ್ಟಣದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ನಡೆಸಿದ ಕಾರ್ಯಕರ್ತೆ ಯರು, ಇಲ್ಲಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬಳಿ ಜಮಾಯಿಸಿದರು. ಅಸಂಘಟಿತ ವಲಯದಲ್ಲಿ ಕೆಲಸ ಮಾಡುತ್ತಿರುವರಿಗೆ ಕನಿಷ್ಠ 10 ಸಾವಿರ ನೀಡಬೇಕು. ಅಂಗನವಾಡಿ ಕಾರ್ಯಕರ್ತೆಯರ ಸೇವೆ ಕಾಯಂಗೊಳಿಸಬೇಕು. ನಿವೃತ್ತಿ ವೇತನ ನೀಡಬೇಕು. ಗುತ್ತಿಗೆ ಹಾಗೂ ಹೊರಗುತ್ತಿಗೆ ಮೂಲಕ ನೇಮಕಾತಿ ಮಾಡಿಕೊಳ್ಳಬಾರದು. ಬಿಪಿಎಲ್ ಪಡಿತರ ಚೀಟಿ ನೀಡಬೇಕು ಎಂದರು.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಗಂಗಪ್ಪ ಗೌಡ ಅವರಿಗೆ ಮನವಿ ಸಲ್ಲಿಸಲಾಯಿತು. ಎಐಟಿಯುಸಿ ಜಿಲ್ಲಾಧ್ಯಕ್ಷ ಎಂ.ಸಿ. ಡೊಂಗ್ರೆ, ಜಿಲ್ಲಾ ಕಾರ್ಯದರ್ಶಿ ಧರ್ಮರಾಜು, ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಎಸ್.ಎನ್. ಜಯಲಕ್ಷ್ಮಿ, ಕಾರ್ಯದರ್ಶಿ ಬಿ. ನಾಗ ರತ್ನ, ಖಜಾಂಚಿ ಕುಶಾಲಮತಿ ಇದ್ದರು.ಅರಸೀಕೆರೆ ವರದಿ: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು `ಸಿ' ಮತ್ತು `ಡಿ' ಗ್ರೂಫ್ ನೌಕರರು ಎಂದು ಪರಿಗಣಿಸ ಬೇಕು ಎಂದು ಒತ್ತಾಯಿಸಿ ಪಟ್ಟಣದಲ್ಲಿ ಕಾರ್ಯಕರ್ತೆಯರು ಗುರುವಾರ ಪ್ರತಿಭಟನೆ ನಡೆಸಿದರು.ಬೆಳಿಗ್ಗೆ 12 ಗಂಟೆಗೆ ಪಟ್ಟಣದ ಪ್ರವಾಸಿಮಂದಿರ ಆವರಣದಲ್ಲಿ ಎಐಟಿಯುಸಿ ಸಂಘಟನೆಯ ತಾಲ್ಲೂಕು ಅಧ್ಯಕ್ಷೆ ಕೆ.ನೇತ್ರಾವತಿ, ಪ್ರಧಾನ ಕಾರ್ಯದರ್ಶಿ ಜಯಮ್ಮ ಮತ್ತು ತಾಲ್ಲೂಕಿನ ವಿವಿಧ ಹಳ್ಳಿಗಳಿಂದ ಆಗಮಿಸಿದ್ದ ಸುಮಾರು 500ಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆ ಯರು ಪ್ರತಿಭಟನಾ ಮೆರವಣಿಗೆ ನಡೆಸಿದರು. ನಂತರ ಸಿಡಿಪಿಒ ಕಚೇರಿ ಮುಂದೆ 15 ನಿಮಿಷ ಧರಣಿ ಕುಳಿತರು.ನಂತರ ಬಿ.ಎಚ್.ರಸ್ತೆ ಮೂಲಕ ಸರ್ಕಾ ರದ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆ ಹೊರಟು ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು. ಬಳಿಕ ತಾಲ್ಲೂಕು ಕಚೇರಿ ಮುಂದೆ 30 ನಿಮಿಷ ಧರಣಿ ನಡೆಸಿದರು.ಕಾರ್ಯದರ್ಶಿ ರತ್ನಮ್ಮ, ಖಜಾಂಚಿ ಸಿ.ಎಚ್.ಶಾಂತಮ್ಮ, ಉಪಾಧ್ಯಕ್ಷರಾದ ಪ್ರೇಮ, ಗಾಯತ್ರಿ, ದಾಕ್ಷಾಯಣಿ ಇತರರು ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry