ಶಿವಮೊಗ್ಗ: ಕೆಲವು ಬದಲಾವಣೆಗಳೊಂದಿಗೆ 2012- 13ನೇ ಸಾಲಿನ ಯೋಜನಾ ಕಾರ್ಯಕ್ರಮಗಳಿಗಾಗಿ ರೂ 186 ಕೋಟಿ ಬಜೆಟ್ಗೆ ಜಿಲ್ಲಾ ಪಂಚಾಯ್ತಿಯಲ್ಲಿ ಸೋಮವಾರ ನಡೆದ ಜಿಲ್ಲಾ ಯೋಜನಾ ಸಮಿತಿ ಅನುಮೋದನೆ ನೀಡಿತು.

ವಿವಿಧ 33 ಇಲಾಖೆಗಳ ಯೋಜನಾ ಕಾರ್ಯಕ್ರಮಗಳಿಗೆ ಆದ್ಯತೆ ಮೇಲೆ ಯೋಜನೆಯನ್ನು ಸಿದ್ಧಪಡಿಸಲಾಗಿದ್ದು, ಕಳೆದ ಸಾಲಿನ ಬಜೆಟ್ಗಿಂತ ಹೆಚ್ಚುವರಿಯಾಗಿ ರೂ 42 ಕೋಟಿ ಸಮಿತಿ ಅನುಮೋದಿಸಿದೆ. ಈ ಹೆಚ್ಚುವರಿ ಅನುದಾನವನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣಕ್ಕೆ ರೂ 11.83 ಕೋಟಿ, ಕುಟುಂಬ ಕಲ್ಯಾಣ ಕಾರ್ಯಕ್ರಮಗಳಿಗ್ಙೆ 1.8 ಕೋಟಿ ಪರಿಶಿಷ್ಟ ಜಾತಿ ಕಲ್ಯಾಣ ಕಾರ್ಯಕ್ರಮಗಳಿಗೆ ರೂ 18.4 ಕೋಟಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಕಾರ್ಯಕ್ರಮಗಳಿಗೆ ರೂ 9.76 ಕೋಟಿ, ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮಗಳಿಗೆ ರೂ 10.4 ಕೋಟಿ, ಪ್ರತಿ ಗ್ರಾಮ ಪಂಚಾಯ್ತಿಗಳಿಗೆ ಹೆಚ್ಚುವರಿ ಅನುದಾನ ರೂ 2 ಲಕ್ಷ ಸೇರಿದಂತೆ ಒಟ್ಟು ರೂ 13.25 ಕೋಟಿ ಹಾಗೂ ಡಾ.ನಂಜುಂಡಪ್ಪ ವರದಿಯಲ್ಲಿ ಉಲ್ಲೆೀಖಿಸಲಾಗಿರುವ ಸೊರಬ ಮತ್ತು ಶಿಕಾರಿಪುರ ತಾಲ್ಲೂಕುಗಳನ್ನು ಹೊರತುಪಡಿಸಿ, ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ರಸ್ತೆ ಮತ್ತು ಸೇತುವೆ ಅಭಿವೃದ್ಧಿ ಕಾರ್ಯಗಳಿಗೆ ್ಙ 5 ಕೋಟಿ ನಿಗದಿಪಡಿಸಲಾಗಿದೆ.

ಪ್ರಸ್ತುತ ಬಜೆಟ್ನಲ್ಲಿ ಕೃಷಿ ಇಲಾಖೆಯು ಕಳೆದ ಬಜೆಟ್ಗಿಂತ್ಙ 16.2 ಕೋಟಿ ಹಾಗೂ ಜಲಾನಯನ ಅಭಿವೃದ್ಧಿ ಇಲಾಖೆಯ ರೂ 64 ಲಕ್ಷ ಕಡಿತಗೊಳಿಸಿ ಬಜೆಟ್ ಮಂಡಿಸಿರುವುದು ಗಮನಾರ್ಹವಾಗಿದೆ.

ನಗರ ಸ್ಥಳೀಯ ಸಂಸ್ಥೆಗಳಿಗೆ ಅನ್ವಯಿಸುವ 13ನೇ ಹಣಕಾಸು ಸಾಮಾನ್ಯ ಮೂಲ ಅನುದಾನದಲ್ಲಿ ಪ್ರಸಕ್ತ ಸಾಲಿನಲ್ಲಿ ರೂ 89.8 ಕೋಟಿ ನಿಗದಿಗೊಳಿಸಲಾಗಿದೆ. ರಸ್ತೆ ಮತ್ತು ಸೇತುವೆಗಳ ನಿರ್ವಹಣೆಗಾಗಿ ಕಳೆದ ವರ್ಷ ರೂ 32.1 ಕೋಟಿ ಅನುದಾನ ನಿಗದಿಗೊಳಿಸಿದ್ದರೆ, ಈ ವರ್ಷ ರೂ 34.2 ಕೋಟಿಗಳಿಗೆ ಅನುದಾನ ನಿಗದಿಗೊಳಿಸಲಾಗಿದೆ. ಆದರೆ, ಎಸ್ಎಫ್ಸಿ ಮುಕ್ತನಿಧಿಯ ಯಾವುದೇ ಬದಲಾವಣೆಗಳಿಲ್ಲದೆ ರೂ 34.42 ಕೋಟಿ ನಿಗದಿಗೊಳಿಸಿ ಬಜೆಟ್ ಅನುಮೋದಿಸಲಾಗಿದೆ. ಆದರೆ,ಎಸ್ಎಫ್ಸಿ ಅನುದಾನ ಬಳಕೆಗೆ ಯಾವುದೇ ನಿರ್ಬಂಧ ಹಾಕದಿರುವಂತೆ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲು ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿ.ಪಂ. ಅಧ್ಯಕ್ಷರಾದ ಶುಭಾ ಕೃಷ್ಣಮೂರ್ತಿ ಮಾತನಾಡಿ, ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದಾಗ ಜಿ.ಪಂ. ಕಡೆಗೆ ಸಹಾಯಕ್ಕಾಗಿ ಎದುರು ನೋಡುತ್ತಾರೆ. ಆದ್ದರಿಂದ, ತುರ್ತು ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರು ಒದಗಿಸಲು ಶಾಶ್ವತ ನಿಧಿ ಸ್ಥಾಪಿಸುವ ಅಗತ್ಯವಿದೆ ಎಂದರು.

ಅಲ್ಲದೇ, ಗ್ರಾಮೀಣ ಪ್ರದೇಶಗಳಲ್ಲಿ ಸ್ಮಶಾನಗಳ ಅಭಿವೃದ್ಧಿ, ನಿರ್ವಹಣೆ ಹಾಗೂ ಗ್ರಾಮಕ್ಕೊಂದರಂತೆ ಸ್ಮಶಾನಕ್ಕಾಗಿ ಭೂಮಿಯನ್ನು ಗುರುತಿಸಲು ಅಗತ್ಯವಿರುವ ರೂ 3 ಕೋಟಿ ಅನುದಾನ ಬಿಡುಗಡೆಗೊಳಿಸಲು ಪ್ರಸ್ತಾವನೆಯಲ್ಲಿ ಸೇರಿಸುವಂತೆ ತಿಳಿಸಿದರು.

ಜಿಲ್ಲಾ ಯೋಜನಾ ಸಮಿತಿಯ ಉಪಾಧ್ಯಕ್ಷ ಹಾಗೂ ನಗರಸಭಾಧ್ಯಕ್ಷ ಎಸ್.ಎನ್. ಚನ್ನಬಸಪ್ಪ ಮಾತನಾಡಿ, ಸಾಂಸ್ಕೃತಿಕ ಚಟುವಟಿಕೆ, ಕ್ರೀಡಾ ಚಟುವಟಿಕೆ ಸೇರಿದಂತೆ ಆಕಸ್ಮಿಕವಾಗಿ ಸಂಭವಿಸುವ ಸಾವು-ನೋವುಗಳಿಗೆ, ಆರೋಗ್ಯ ಸಂಬಂಧಿ ವಿಷಯಗಳ ಕುರಿತು ತಕ್ಷಣದ ನೆರವು ನೀಡಲು ಅಧ್ಯಕ್ಷರ ಹೆಸರಿನಲ್ಲಿ ನಿಧಿಯನ್ನು ಸ್ಥಾಪಿಸಲು ಹಾಗೂ ನಗರದಲ್ಲಿ ವ್ಯಾಸಂಗ ಮಾಡುತ್ತಿರುವ ಗ್ರಾಮೀಣ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲು ಸಭೆಯಲ್ಲಿ ನಿರ್ಣಯ ಕೈಗೊಂಡು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.
ಸಭೆಯಲ್ಲಿ ಜಿ.ಪಂ. ಉಪಾಧ್ಯಕ್ಷ ಎಚ್.ಬಿ. ಗಂಗಾಧರಪ್ಪ, ಜಿ.ಪಂ. ಉಪಕಾರ್ಯದರ್ಶಿ ಹನುಮನರಸಯ್ಯ, ಯೋಜನಾಧಿಕಾರಿ ಶಂಕರಪ್ಪ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.