ರೂ 3 ಲಕ್ಷ ಮೌಲ್ಯದ ಬೀಟೆ ಮರ ವಶ

7

ರೂ 3 ಲಕ್ಷ ಮೌಲ್ಯದ ಬೀಟೆ ಮರ ವಶ

Published:
Updated:

ಕುಶಾಲನಗರ: ಸಮೀಪದ ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ತೋಟದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸುಮಾರು ಮೂರು ಲಕ್ಷ ರೂಪಾಯಿ ಮೌಲ್ಯದ ಬೀಟೆ ಮರಗಳನ್ನು ಸುಂಟಿಕೊಪ್ಪ ಪೊಲೀಸರು ಈಚೆಗೆ ವಶಪಡಿಸಿಕೊಂಡಿದ್ದಾರೆ.ಸುಂಟಿಕೊಪ್ಪದ ಹೊರೂರು ಗ್ರಾಮದ ತೈಕಪ್ಪ ಎಂಬುವವರ ತೋಟವೊಂದರಲ್ಲಿ ಸುಮಾರು ಮೂರು ಲಕ್ಷ ರೂಪಾಯಿ ಬೆಲೆಬಾಳುವ ಬಾರೀ ಘಾತ್ರದ ಹದಿನೇಳು ಬೀಟೆ ಮರದ ತುಂಡುಗಳನ್ನು ಜಿಲ್ಲಾ ವರಿಷ್ಠಾಧಿಕಾರಿ ಎಂ.ಎನ್. ಅನುಚೇತ್ ಅವರ ಮಾರ್ಗದರ್ಶನದಲ್ಲಿ ಸುಂಟಿಕೊಪ್ಪ ಠಾಣಾಧಿಕಾರಿ ರತನ್‌ಸಿಂಗ್ ಮತ್ತು ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.ತೈಕಪ್ಪ ಎಂಬುವವರ ತೋಟದಲ್ಲಿ ಕಳ್ಳರು ಈ ಮರಗಳನ್ನು ಅಕ್ರಮವಾಗಿ ಸಾಗಿಸಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ. ಆದರೆ ಅಕ್ರಮವಾಗಿ ಮರಗಳನ್ನು ಸಂಗ್ರಹಿಸಿಟ್ಟ ಬಗ್ಗೆ ಪೊಲೀಸರಿಗೆ ತೋಟದ ಮಾಲೀಕರು ಮಾಹಿತಿ ನೀಡಿದ್ದರು.ಮರಗಳನ್ನು ಸಾಗಾಟ ಮಾಡಲು ಯತ್ನಿಸಿರುವವರ ಬಗ್ಗೆ ನಿಖರ ಮಾಹಿತಿ ದೊರೆತಿಲ್ಲ ಎಂದು ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ರತನ್‌ಸಿಂಗ್ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry