ಶನಿವಾರ, ಮೇ 8, 2021
26 °C
ಜಿಲ್ಲಾ ಕಾರಾಗೃಹಕ್ಕೆ ದಿಢೀರ್ ಭೇಟಿ

ರೂ 31,677 ನಗದು, ಚಾಕು, ಬ್ಲೇಡ್ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ನಗರದ ಕರ್ಣಂಗೇರಿಯಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಪೊಲೀಸ್ ಹಿರಿಯ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿದಾಗ ಕೈದಿಗಳ ಬಳಿ ರೂ. 31,677 ನಗದು ಹಣ, 3 ಮೊಬೈಲ್ ಫೋನ್, 3 ಚಾಕು, 1 ರೇಸರ್ ಬ್ಲೇಡ್, 3 ಎಟಿಎಂ ಕಾರ್ಡ್ ಮತ್ತು 1 ಪಾನ್ ಕಾರ್ಡ್ ಪತ್ತೆಯಾಗಿವೆ.ಮಡಿಕೇರಿ ಉಪವಿಭಾಗದ ಡಿವೈಎಸ್‌ಪಿ ರಾಜೀವ್ ಮಾಂಗ್ ಅವರ ನೇತೃತ್ವದಲ್ಲಿ ಶನಿವಾರ ಬೆಳಿಗ್ಗೆ 6 ರಿಂದ 9ರವರೆಗೆ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ತಂಡವು ಕಾರಾಗೃಹದಲ್ಲಿದ್ದ 230 ಕೈದಿಗಳನ್ನು ಪರಿಶೀಲಿಸಿದ್ದು, ಕೈದಿಗಳು ಅಕ್ರಮವಾಗಿ ಇಟ್ಟುಕೊಂಡಿದ್ದ ವಸ್ತುಗಳು ಹಾಗೂ ಹಣವನ್ನು ವಶಪಡಿಸಿಕೊಂಡಿದೆ.ವಶಪಡಿಸಿಕೊಂಡ ಹಣ ಮತ್ತು ವಸ್ತುಗಳನ್ನು ಜೈಲಿನ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದ್ದು, ಮುಂದಿನ ತನಿನ್ನು ಕೈಗೊಳ್ಳಲಾಗಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಎಂ. ಅನುಚೇತ್ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.