ಶನಿವಾರ, ಜೂನ್ 19, 2021
28 °C

ರೂ 32.44 ಲಕ್ಷ ಪರಿಹಾರ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರೂ 32.44 ಲಕ್ಷ ಪರಿಹಾರ ವಿತರಣೆ

ಬೆಳಗಾವಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವರ್ಗಗಳ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ಥರಾದ 112 ಮಂದಿಗೆ 32.44 ಲಕ್ಷ ರೂ ಪರಿಹಾರ ಧನವನ್ನು ಜಿಲ್ಲಾ ಆಡಳಿತದ ವತಿಯಿಂದ ವಿತರಿಸಲಾಯಿತು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ  ಜಿಲ್ಲಾಧಿಕಾರಿ ವಿ. ಅನ್ಬುಕುಮಾರ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆಯಲ್ಲಿ ಒಟ್ಟು 47 ಪ್ರಕರಣಗಳಲ್ಲಿ ಪರಿಹಾರ ಧನ ವಿತರಿಸಲಾಯಿತು.ಅದರಂತೆ 2011ರ ಸೆ. 1 ರಿಂದ ನವೆಂಬರ್ 30ರ ವರೆಗೆ ಪರಿಶಿಷ್ಟ ಜಾತಿ, ಪಂಗಡದ ದೌರ್ಜನ್ಯ ಅಧಿನಿಯಮದ ಅಡಿ ಒಟ್ಟು 36 ಪ್ರಕರಣಗಳು ವರದಿಯಾಗಿವೆ. ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿ 22 ಪ್ರಕರಣಗಳಿವೆ ಎಂದು ತಿಳಿಸಲಾಯಿತು.ಜಿಲ್ಲಾಧಿಕಾರಿ ವಿ. ಅನ್ಬುಕುಮಾರ ಅವರು ಭೋಜ ಗ್ರಾಮದಲ್ಲಿ ನಡೆದ ಗುಂಪು ಘರ್ಷಣೆಯಲ್ಲಿ ಕೊಲೆಗೆ ಈಡಾಗಿದ್ದ ಪರಿಶಿಷ್ಟ ಜಾತಿಯ ರಾಜೀವ ಸಣ್ಣಕ್ಕಿ ಅವರ ಪತ್ನಿಗೆ 2 ಲಕ್ಷ ರೂ. ಪರಿಹಾರ ಧನ ವಿತರಿಸಲಾಯಿತು.ವಿವಿಧ ಇಲಾಖೆಗಳ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರ ಸಮಸ್ಯೆಗಳಿಗೆ ನಗರ, ಸ್ಥಳೀಯ ಸಂಸ್ಥೆಗಳು ಶೇ 22.75 ಹಾಗೂ ಗ್ರಾಮ ಪಂಚಾಯಿತಿಯ ಶೇ 25 ರ ಮೀಸಲು ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಸೂಚನೆ ನಡೆಸಿದರು.ಅನುಗೋಳ, ಬಸವನಕುಡಚಿ ಗ್ರಾಮಗಳಲ್ಲಿ ಪರಿಶಿಷ್ಟ ಜಾತಿ, ಪಂಗಡ ವರ್ಗದ ಜನರಿಗೆ ಜನಸಂಖ್ಯೆ ಆಧಾರದ ಮೇಲೆ ಸ್ಮಶಾನ ಭೂಮಿ ದೊರಕಿಸಿಕೊಡಬೇಕು. ಯಾವುದೇ ಕಾರಣ ನೀಡದೇ ಸೌಲಭ್ಯ ಕಲ್ಪಿಸಬೇಕು. ಅದರಂತೆ ಅಲಾರವಾಡ ಗ್ರಾಮದಲ್ಲಿ ಹಾಗೂ ಖಾನಾಪುರ ಪಟ್ಟಣದಲ್ಲಿ ಅವಶ್ಯಕ ಕ್ರಮಕೈಗೊಳ್ಳಬೇಕು ಎಂದು ಸಲಹೆ ನೀಡಿದರು.ಸಭೆಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠ ಸಂದೀಪ ಪಾಟೀಲ ಮಾತನಾಡಿ, ಪರಿಶಿಷ್ಟ ಜಾತಿ, ಪಂಗಡ ಜನಾಂಗದ ಮೇಲೆ ದೌರ್ಜನ್ಯ ಮಾಡುವವರು ವಿವಿಧ ಪ್ರಕರಣಗಳಲ್ಲಿ ತ್ವರಿತವಾಗಿ ಜಾಮೀನು ಪಡೆಯುತ್ತಿರುವುದು ಮನಗಂಡು, ಈ ಕುರಿತಂತೆ ಸೂಕ್ತ ಕ್ರಮಕೈಗೊಳ್ಳಲಾಗಿದೆ ಎಂದರು.ಶಾಸಕ ಕಾಕಾಸಾಹೇಬ ಪಾಟೀಲ ಮಾತನಾಡಿ, ಪರಿಶಿಷ್ಟ ಜಾತಿ, ವರ್ಗದ ಮಕ್ಕಳಿಗೆ ಶಿಷ್ಯವೇತನ ನೀಡುವಲ್ಲಿ ವಿಳಂಬ ಧೋರಣೆ ಅನುಸರಿಸಬಾರದು. ಗಂಗಾ ಕಲ್ಯಾಣ ಯೋಜನೆಯಡಿ ತೋಡಲಾಗುವ ಕೊಳವೆ ಬಾವಿಗಳಿಗೆ ಸಮರ್ಪಕ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಲು ಕ್ರಮಕೈಗೊಳ್ಳಬೇಕು ಎಂದರು.ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸದಸ್ಯರಾದ ಮಲ್ಲೆೀಶ ಚೌಗಲೆ, ಪ್ರಕಾಶ ಹಲಗಿ, ಅಶೋಕ ಐನವರ, ಸಿ.ಆರ್.ಇ. ಸೆಲ್ ಎಸ್.ಪಿ. ಅಶೋಕ ಕುರೇರ, ಜಿ.ಪಂ. ಉಪಕಾರ್ಯದರ್ಶಿ ಶಶಿಧರ  ಮತ್ತಿತರರು ಪಾಲ್ಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.