`ರೂ. 80 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ'

7

`ರೂ. 80 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ'

Published:
Updated:

ಗುಂಡ್ಲುಪೇಟೆ: ಸುವರ್ಣ ಗ್ರಾಮ ಯೋಜನೆಯಡಿ ಆಯ್ಕೆಯಾಗಿರುವ ಗ್ರಾಮಗಳಿಗೆ ರೂ. 80 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾ ಗುವುದು ಎಂದು ಶಾಸಕ ಎಚ್.ಎಸ್. ಮಹದೇವಪ್ರಸಾದ್ ಸೋಮವಾರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸುವರ್ಣ ಗ್ರಾಮ ಯೋಜನೆಯಡಿ ಆಯ್ಕೆಯಾಗಿರುವ ಗ್ರಾಮಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಗಿಸ ಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ತಾಲ್ಲೂಕಿನಾದ್ಯಂತ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಚಿತ್ವ ಕಾಪಾಡಬೇಕು ಮತ್ತು ರೋಗಿಗಳಿಗೆ ಉತ್ತಮ ಸೇವೆ ಲಭ್ಯವಾಗುವಂತೆ ಮಾಡಲು ಕ್ರಮಕೈಗೊಳ್ಳ ಬೇಕೆಂದು ತಾಲ್ಲೂಕು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು. ಪಡಿತರ ಚೀಟಿಗಳನ್ನು ಸಮರ್ಪ ಕವಾಗಿ ವಿತರಿಸಿ ಗ್ರಾಮೀಣ ಪ್ರದೇಶ ದಲ್ಲಿರುವ ಎಲ್ಲಾ ನ್ಯಾಯ ಬೆಲೆ ಅಂಗಡಿಗಳಲ್ಲಿ ಪ್ರತಿ ತಿಂಗಳು ಕನಿಷ್ಟ ಹತ್ತು ದಿವಸಗಳ ವರೆಗೆ ಪಡಿತರ ವಿತರಣೆ ಮಾಡಲು ಕ್ರಮಕೈಗೊಳ್ಳಲು ತಿಳಿಸಿದರು.

ತಾಲ್ಲೂಕಿನ ಅಭಿವೃದ್ಧಿಯ ದೃಷ್ಟಿ ಯಿಂದ ಎಲ್ಲಾ ಇಲಾಖೆಯ ಅಧಿಕಾರಿ ಗಳು ಉತ್ತಮವಾಗಿ ಸೇವೆ ಸಲ್ಲಿಸ ಬೇಕು ಎಂದರು.ಚಾಮರಾಜನಗರ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ನಾಗಶ್ರೀ, ಉಪಾ ಧ್ಯಕ್ಷ ಪಿ. ಮಹದೇವಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಗಾಯಿತ್ರಿ, ಕಾರ್ಯ ನಿರ್ವಾಹಕ ಅಧಿಕಾರಿ ಶಿವಪ್ರಸಾದ್ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry