ಸೋಮವಾರ, ಮೇ 23, 2022
21 °C

ರೂ 88 ಸಾವಿರ ಕೋಟಿ ಬಂಡವಾಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ವಿಶ್ವ ಬಂಡವಾಳ ಹೂಡಿಕೆ ದಾರರ ಸಮಾವೇಶದಲ್ಲಿ ಗುಲ್ಬರ್ಗ ವಿಭಾಗಕ್ಕೆ 63 ಯೋಜನೆಗಳಿಗೆ ಒಪ್ಪಂದ ಮಾಡಿಕೊಳ್ಳಲಾಗಿದ್ದು ಇದಕ್ಕಾಗಿ 88 ಸಾವಿರ ಕೋಟಿ ರೂಪಾಯಿ ಬಂಡವಾಳ ಹೂಡಿಕೆಯಾ ಗಲಿದೆ. ಇದರಿಂದ 16,269 ಜನರಿಗೆ ಉದ್ಯೋಗ ಕಲ್ಪಿಸಿದಂತಾಗುತ್ತದೆ ಎಂದು ಹೈದರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಅಮರನಾಥ ಪಾಟೀಲ್ ತಿಳಿಸಿದರು.ಶುಕ್ರವಾರ ಎಚ್.ಕೆ.ಡಿ.ಬಿ. ಸಭಾಂಗಣದಲ್ಲಿ ನಡೆದ ಬಂಡವಾಳ ಹೂಡಿಕೆದಾರರ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹೈ-ಕ ಪ್ರದೇಶದ ಪ್ರತಿ ಜಿಲ್ಲೆಯಲ್ಲೂ ಹೂಡಿಕೆದಾರರೊಂದಿಗೆ ವಿಕೇಂದ್ರೀಕರಣ ಸಭೆಗಳನ್ನು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಿಂಗಲ್ ವಿಂಡೋ ಮಾದರಿಯಲ್ಲಿ ನಡೆಸಿ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದರು.ಕೈಗಾರಿಕೋದ್ಯಮಿಗಳಿಗೆ ಹಾಗೂ ಹೂಡಿಕೆದಾರರಿಗೆ ಪರಿಣಿತ ಕೆಲಸಗಾರರು ಬೇಕಾಗಿದ್ದಲ್ಲಿ ಉದ್ಯೋಗ ಮತ್ತು ತರಬೇತಿ ಇಲಾಖೆಯಿಂದ ತರಬೇತಿ ಕೊಡಿಸಿ ಉದ್ಯಮಿದಾರರಿಗೆ ನೀಡಲಾಗುವುದು ಇದಕ್ಕೆ ಬ್ಯಾಂಕುಗಳ ಸಹಕಾರ ಅಗತ್ಯವಾಗಿದೆ. ಗುಲ್ಬರ್ಗ ವಿಭಾಗದ ಗುಲ್ಬರ್ಗದಲ್ಲಿ ಐ.ಟಿ. ಪಾರ್ಕ್, ಅಪರೆಲ್ ಪಾರ್ಕ್, ಥರ್ಮಲ್ ಪ್ಲಾಂಟ್, ಜೇವರ್ಗಿಯಲ್ಲಿ ಫುಡ್ ಪಾರ್ಕ್, ಯಾದಗಿರಿ ಹಾಗೂ ಬೀದರದಲ್ಲಿ ಆಟೋಮೋಬೈಲ್ ಮತ್ತು ಫಾರ್ಮಸಿ ಕೈಗಾರಿಕೆಗಳನ್ನು ಸ್ಥಾಪಿಸಲು ಕೈಗಾರಿಕೋದ್ಯಮಿಗಳು ಮುಂದೆ ಬಂದಿದ್ದು ಗುಲ್ಬರ್ಗದಲ್ಲಿ ಪರ್ಯಾಯ ವಿದ್ಯುತ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಕ್ರೆಡಲ್ ಸಂಸ್ಥೆಯನ್ನು ಸಂಪರ್ಕಿಸಲಾಗಿದೆ ಎಂದು ಹೇಳಿದರು.ಮಂಡಳಿಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮಹಾನಗರ ಪಾಲಿಕೆಯ ಆಯುಕ್ತ ಮನೋಜ್ ಜೈನ್, ತೊಗರಿ ಬೆಳೆಗಾರರ ಸಂಘದ ಅಧ್ಯಕ್ಷ ಬಸವರಾಜ ಇಂಗಿನ್, ಖ್ಯಾತ ಉದ್ಯಮಿ ಎಸ್.ಎಸ್. ಪಾಟೀಲ್, ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಗೋಪಾಲ ರಘೋಜಿ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.