ರೆಡ್ಡಿಗಳ ಸಿಬಿಐ ತನಿಖೆ ಮತ್ತೆ ಆರಂಭ

ಗುರುವಾರ , ಮೇ 23, 2019
28 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ರೆಡ್ಡಿಗಳ ಸಿಬಿಐ ತನಿಖೆ ಮತ್ತೆ ಆರಂಭ

Published:
Updated:

ಹೈದರಾಬಾದ್ (ಐಎಎನ್‌ಎಸ್): ಅಕ್ರಮ ಗಣಿಗಾರಿಕೆ ಆರೋಪದಲ್ಲಿ ವಾರದ ಹಿಂದೆ ಬಂಧಿಸಲ್ಪಟ್ಟಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತು ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸ ರೆಡ್ಡಿ ಅವರ ತನಿಖೆಯನ್ನು ಸಿಬಿಐ ಮಂಗಳವಾರ ಮಧ್ಯಾಹ್ನದ ನಂತರ ಮತ್ತೆ ಆರಂಭಿಸಿತು.ಸಿಬಿಐ ವಿಶೇಷ ನ್ಯಾಯಾಲಯವು ಮಂಗಳವಾರ ಬೆಳಿಗ್ಗೆ ಆರೋಪಿಗಳನ್ನು ಆರು ದಿನಗಳ ತನಿಖೆಗಾಗಿ ಸಿಬಿಐ ಅಧಿಕಾರಿಗಳ ವಶಕ್ಕೆ ಒಪ್ಪಿಸಿದ ಬಳಿಕ ಈ ತನಿಖೆ ಆರಂಭವಾಗಿದೆ. ಚಂಚಲ್‌ಗುಡಾ ಕೇಂದ್ರ ಕಾರಾಗೃಹದಲ್ಲಿದ್ದ ಈ ಇಬ್ಬರನ್ನು ಇಲ್ಲಿನ ಸಿಬಿಐ ಕಚೇರಿಗೆ ಈಗ ಸ್ಥಳಾಂತರಿಸಲಾಗಿದೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿನ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಈ ತನಿಖೆ ನಡೆಯುತ್ತಿದೆ.ಈ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಬಿಐ ಜಂಟಿ ನಿರ್ದೇಶಕ ವಿ.ವಿ. ಲಕ್ಷ್ಮೀನಾರಾಯಣ, `ಬಂಧಿತ ರೆಡ್ಡಿಗಳ ತನಿಖೆಯಲ್ಲಿ ಹೆಸರಿಸಲ್ಪಡುವ ಇತರ ಎಲ್ಲ ಆರೋಪಿಗಳನ್ನು ಸಹ ಬಂಧಿಸಿ ತನಿಖೆಗೊಳಪಡಿಸಲಾಗುವುದು~ ಎಂದರು. “ನಾವು ಯಾರನ್ನು ಬೇಕಿದ್ದರೂ ತನಿಖೆಗೆ ಒಳಪಡಿಸಬಹುದು ಮತ್ತು ಯಾವ ಸ್ಥಳದ ಮೇಲೆ ಬೇಕಿದ್ದರೂ ದಾಳಿ ನಡೆಸಬಹುದು” ಎಂದು ಅವರು ತಿಳಿಸಿದರು.  `ತನಿಖಾ ಅವಧಿ ವಿಸ್ತರಿಸುವಂತೆ ಕೋರಿ ಸಿಬಿಐ ಮತ್ತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಬಹುದು. ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಆರೋಪಿಗಳ ಒಪ್ಪಿಗೆಯನ್ವಯ ಅವರನ್ನು ಮಂಪರು ಪರೀಕ್ಷೆ, ಸುಳ್ಳುಪತ್ತೆ ಪರೀಕ್ಷೆ ಹಾಗೂ ಮೆದುಳು ವಿಶ್ಲೇಷಣೆ ಪರೀಕ್ಷೆಗಳಿಗೂ ಒಳಪಡಿಸಬಹುದಾಗಿದೆ~ ಎಂದೂ ಅವರು ಹೇಳಿದರು.ಹೈಕೋರ್ಟ್‌ಗೆ ಮೊರೆ: ಈ ಮಧ್ಯೆ, ರೆಡ್ಡಿಗಳಿಗೆ ಜಾಮೀನು ನಿರಾಕರಿಸಿರುವ ವಿಶೇಷ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಅವರ ವಕೀಲರು ಹೈಕೋರ್ಟ್ ಮೊರೆ ಹೋಗಿದ್ದಾರೆ. ಈ ನಡುವೆಯೂ ಹೆಚ್ಚುವರಿ ಎಸ್ಪಿ ಆರ್.ಎಂ.ಖಾನ್ ನೇತೃತ್ವದ ಸಿಬಿಐ ಅಧಿಕಾರಿಗಳ ತಂಡ ಚಂಚ ಲ್‌ಗುಡಾ ಕಾರಾಗೃಹದಲ್ಲಿದ್ದ ಆರೋಪಿ ಗಳನ್ನು ತಮ್ಮ ವಶಕ್ಕೆ ಪಡೆದು, ತನಿಖೆ ಗಾಗಿ ಸಿಬಿಐ ಕಚೇರಿಗೆ ಕರೆದೊಯ್ದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry