ರೆಡ್ಡಿದ್ವಯರ ಜಾಮೀನು ಅರ್ಜಿ ವಿಚಾರಣೆ ಇಂದು

ಗುರುವಾರ , ಮೇ 23, 2019
29 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ರೆಡ್ಡಿದ್ವಯರ ಜಾಮೀನು ಅರ್ಜಿ ವಿಚಾರಣೆ ಇಂದು

Published:
Updated:

ಹೈದರಾಬಾದ್: ದೆಹಲಿ ಹೈಕೋರ್ಟ್ ಬಳಿ ಬಾಂಬ್ ಸ್ಫೋಟ ಘಟನೆ ಖಂಡಿಸಿ ವಕೀಲರು ಕಲಾಪ ಬಹಿಷ್ಕರಿಸಿದ್ದರಿಂದ ಅಕ್ರಮ ಗಣಿ ಚಟುವಟಿಕೆ ಆರೋಪದಡಿ ಸಿಬಿಐ ನಿಂದ ಬಂಧಿತರಾಗಿರುವ ಓಬಳಾಪುರಂ ಕಂಪೆನಿ ಮಾಲಿಕ ಗಾಲಿ ಜನಾರ್ದನ ರೆಡ್ಡಿ ಮತ್ತು ವ್ಯವಸ್ಥಾಪಕ ನಿರ್ದೇಶಕ ಬಿ.ವಿ.ಶ್ರೀನಿವಾಸ ರೆಡ್ಡಿ ಅವರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ಶುಕ್ರವಾರಕ್ಕೆ ಮುಂದೂಡಿಕೆಯಾಗಿದೆ.ಈ ಮುಂಚೆ ನಿಗದಿಯಾಗಿದ್ದಂತೆ ಗುರುವಾರವೇ ಈ ಅರ್ಜಿಗಳ ವಿಚಾರಣೆ ನಡೆಯಬೇಕಿತ್ತು. ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಎರಡು ವಾರಗಳ ಕಾಲ ತನ್ನ ವಶಕ್ಕೆ ನೀಡಲು ಕೋರಿ ಸಿಬಿಐ ಸಲ್ಲಿಸಿರುವ ವಿಚಾರಣೆ ಕೂಡ ಗುರುವಾರ ನಡೆಯಬೇಕಿತ್ತು.ಆರೋಪಿಗಳ ಪರ ಕಿರಿಯ ವಕೀಲೆ ಎನ್.ಅನುಪಮಾ ಗುರುವಾರ ನ್ಯಾಯಾಧೀಶರ ಮುಂದೆ ಹಾಜರಾಗಿದ್ದರು. ತಮ್ಮ ಹಿರಿಯ ವಕೀಲರು ಶುಕ್ರವಾರ ನವದೆಹಲಿಯಲ್ಲಿ ಸುಪ್ರೀಂಕೋರ್ಟ್‌ಗೆ ಹಾಜರಾಗಬೇಕಿರುವುದರಿಂದ  ಜಾಮೀನು ಅರ್ಜಿಗಳ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಲು ಕೋರಿದರು. ಆದರೆ ನ್ಯಾಯಾಲಯ ಇದಕ್ಕೆ ಒಪ್ಪದೇ ಶುಕ್ರವಾರವೇ ವಿಚಾರಣೆ ನಡೆಸುವುದಾಗಿ  ತಿಳಿಸಿತು.

 

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry