ಹೈದರಾಬಾದ್: ನಿಯಮಬಾಹಿರ ಗಣಿ ಚಟುವಟಿಕೆ ಆರೋಪದಡಿ ಬಂಧಿತರಾಗಿರುವ ಕರ್ನಾಟಕದ ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ಅವರ ಅಕ್ರಮ ಸ್ಥಿರಾಸ್ತಿ ಮತ್ತು ಚರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಿಬಿಐ ಸಜ್ಜಾಗುತ್ತಿದೆ.

ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ಹಲವೆಡೆ ವಿವಿಧ ಆಸ್ತಿಗಳ ಮೇಲೆ ರೆಡ್ಡಿ ಬಂಡವಾಳ ಹೂಡಿದ್ದಾರೆ ಎನ್ನಲಾಗಿದೆ.

ಆಂಧ್ರದ ಕರ್ನೂಲಿನಲ್ಲಿ ಮಾವಿನ ತೋಟಗಳ ಮೇಲೆ, ನಂದ್ಯಾಲದಲ್ಲಿ ಮನೆಗಳ ಮೇಲೆ ರೆಡ್ಡಿ ಭಾರಿ ಹೂಡಿಕೆ ಮಾಡಿರುವ ಬಗ್ಗೆ ತನಿಖಾ ಸಂಸ್ಥೆ ಈಗಾಗಲೇ ಮಾಹಿತಿ ಕಲೆ ಹಾಕಿದೆ. ರೆಡ್ಡಿ ಪತ್ನಿ ಅರುಣಾ ಕ್ರಯಪತ್ರ ನೋಂದಣಿ ಮಾಡಿಸಲು ನಂದ್ಯಾಲಕ್ಕೆ ಹೆಲಿಕಾಪ್ಟರ್ನಲ್ಲಿ ಆಗಮಿಸಿದ್ದ ಮಾಹಿತಿಯೂ ಇದರಲ್ಲಿ ಸೇರಿದೆ ಎಂದು ಮೂಲಗಳು ತಿಳಿಸಿವೆ.

ಸ್ಥಿರಾಸ್ತಿ ಖರೀದಿ ಜತೆಗೆ ಹಲವಾರು ಕಂಪೆನಿಗಳ ಷೇರುಗಳಲ್ಲಿ ಹಣ ಹೂಡಿಕೆ ಮಾಡಲಾಗಿದೆ. ನ್ಯಾಯಾಲಯಗಳ ನೆರವಿನಿಂದ ಇವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.