ಬೆಂಗಳೂರು: ಅಸೋಸಿಯೇಟೆಡ್ ಮೈನಿಂಗ್ ಕಂಪೆನಿ (ಎಎಂಸಿ) ಮೂಲಕ ಅಕ್ರಮ ಗಣಿಗಾರಿಕೆ ನಡೆಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ವಶದಲ್ಲಿರುವ ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ಮತ್ತು ಅವರ ಸಹಚರ ಅಲಿಖಾನ್ನನ್ನು ಸೋಮವಾರ ವಿಶೇಷ ನ್ಯಾಯಾಲಯದ ಎದುರು ಹಾಜರುಪಡಿಸಲಾಗುತ್ತದೆ. ಇಬ್ಬರೂ ಆರೋಪಿಗಳನ್ನು ಇನ್ನೂ ಕೆಲ ದಿನಗಳ ಕಾಲ ತನ್ನ ವಶಕ್ಕೆ ಒಪ್ಪಿಸುವಂತೆ ಸಿಬಿಐ ಮನವಿ ಸಲ್ಲಿಸುವ ಸಾಧ್ಯತೆ ಇದೆ.

ಮಾರ್ಚ್ 2ರಂದು ನಗರ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಘರ್ಷಣೆ ನಡೆದಿದ್ದ ಹಿನ್ನೆಲೆಯಲ್ಲಿ ಸೋಮವಾರದ ಮಟ್ಟಿಗೆ ಸಿಬಿಐ ವಿಶೇಷ ನ್ಯಾಯಾಲಯವನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಎದುರಿನ ಗಾಂಧಿ ಭವನಕ್ಕೆ ಸ್ಥಳಾಂತರಿಸಲಾಗಿದೆ. ರೆಡ್ಡಿ ಮತ್ತು ಅಲಿಖಾನ್ನನ್ನು ಅಲ್ಲಿಗೆ ಕರೆದೊಯ್ದು, ನ್ಯಾಯಾಧೀಶರ ಎದುರು ಹಾಜರುಪಡಿಸಲಾಗುತ್ತದೆ. ಹೈದರಾಬಾದ್ನ ಚಂಚಲಗುಡ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ರೆಡ್ಡಿ ಅವರನ್ನು `ಸಂಚಾರ ವಾರೆಂಟ್~ ಆಧಾರದ ಮೇಲೆ ಬೆಂಗಳೂರಿಗೆ ಕರೆತಂದು ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯದ ಎದುರು ಮಾರ್ಚ್ 2ರಂದು ಹಾಜರುಪಡಿಸಲಾಗಿತ್ತು.

ಅವರನ್ನು ಮಾ.12ರವರೆಗೆ ಸಿಬಿಐ ವಶಕ್ಕೆ ಒಪ್ಪಿಸಿ ನ್ಯಾಯಾಧೀಶ ಬಿ.ಎಂ.ಅಂಗಡಿ ಆದೇಶಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಅಲಿಖಾನ್ ಮಾ.2ರಂದು ಶರಣಾಗಿದ್ದ. ಮೂರು ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದ ಆತನನ್ನು, ಮಾ.5ರಂದು ನ್ಯಾಯಾಲಯ ತನಿಖಾ ತಂಡದ ವಶಕ್ಕೆ ಒಪ್ಪಿಸಿತ್ತು.

ಜನಾರ್ದನ ರೆಡ್ಡಿ ಅವರನ್ನು ಎಂಟು ದಿನಗಳ ಕಾಲ ಮತ್ತು ಅಲಿಖಾನ್ನನ್ನು ಐದು ದಿನಗಳ ಕಾಲ ಡಿಐಜಿ ಆರ್.ಹಿತೇಂದ್ರ ನೇತೃತ್ವದ ಸಿಬಿಐ ಅಧಿಕಾರಿಗಳ ತಂಡ ನಿರಂತರವಾಗಿ ವಿಚಾರಣೆ ನಡೆಸಿದೆ. ಈ ಪ್ರಕರಣದಲ್ಲಿ ರೆಡ್ಡಿ ಅವರ ಪತ್ನಿ ಜಿ.ಲಕ್ಷ್ಮಿ ಅರುಣಾ ಎರಡನೆ ಆರೋಪಿ. ಈವರೆಗೂ ಸಿಬಿಐ ಪೊಲೀಸರು ಅವರನ್ನು ವಿಚಾರಣೆ ನಡೆಸಿಲ್ಲ.

ಉಳಿದಂತೆ ಹಲವು ಆರೋಪಿಗಳು, ರೆಡ್ಡಿ ಅವರ ಸಹಚರರನ್ನು ಗಂಗಾನಗರದ ಸಿಬಿಐ ಕಚೇರಿಗೆ ಕರೆಸಿಕೊಂಡ ತನಿಖಾ ತಂಡ ವಿಚಾರಣೆಗೆ ಒಳಪಡಿಸಿದೆ. ಪ್ರಕರಣದ ತನಿಖೆಯ ಪ್ರಗತಿ ಕುರಿತ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿ, ಆರೋಪಿಗಳನ್ನು ಹೆಚ್ಚಿನ ತನಿಖೆಗೆ ಒಳಪಡಿಸಲು ಮತ್ತೆ ತನ್ನ ವಶಕ್ಕೆ ನೀಡುವಂತೆ ಸಿಬಿಐ ಸೋಮವಾರ ಮನವಿ ಸಲ್ಲಿಸುವ ಸಾಧ್ಯತೆ ದಟ್ಟವಾಗಿದೆ.

ಬಿಗಿ ಭದ್ರತೆ: ರೆಡ್ಡಿ ಮತ್ತು ಅಲಿಖಾನ್ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ವೇಳೆ ಹೆಚ್ಚಿನ ಭದ್ರತೆ ಒದಗಿಸುವಂತೆ ಸಿಬಿಐ ಅಧಿಕಾರಿಗಳು ನಗರ ಪೊಲೀಸ್ ಕಮಿಷನರ್ ಕೆ.ಜ್ಯೋತಿ ಪ್ರಕಾಶ್ ಮಿರ್ಜಿ ಅವರಿಗೆ ಮನವಿ ಮಾಡಿದ್ದಾರೆ. ಮಾ.2ರಂದು ರೆಡ್ಡಿ ಅವರನ್ನು ಹಾಜರುಪಡಿಸುವ ವೇಳೆಯೇ ಗಲಭೆ ನಡೆದ ಹಿನ್ನೆಲೆಯಲ್ಲಿ ಸೋಮವಾರ ಬಿಗಿ ಭದ್ರತೆ ಒದಗಿಸಲು ಪೊಲೀಸರು ನಿರ್ಧರಿಸಿದ್ದಾರೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದನೆ ಆರೋಪಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ವಿಚಾರಣೆಗೆ ಹಾಜರಾಗಿದ್ದ ಸಂದರ್ಭದಲ್ಲಿ ನ್ಯಾಯಾಲಯದಿಂದ 500 ಮೀಟರ್ ದೂರದಲ್ಲೇ ಸಾರ್ವಜನಿಕರು, ಮಾಧ್ಯಮದವರು ಮತ್ತು ಪ್ರಕರಣಕ್ಕೆ ಸಂಬಂಧವಿಲ್ಲದ ವಕೀಲರನ್ನು ತಡೆಯಲಾಗಿತ್ತು. ಸೋಮವಾರ ಕೂಡ ಇದೇ ರೀತಿಯ ನಿರ್ಬಂಧ ವಿಧಿಸುವ ಸಾಧ್ಯತೆ ಇದೆ.

ಭದ್ರತೆ ಕುರಿತು `ಪ್ರಜಾವಾಣಿ~ಗೆ ಪ್ರತಿಕ್ರಿಯಿಸಿದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಟಿ.ಸುನೀಲ್ಕುಮಾರ್, `ಸಿಬಿಐ ಅಧಿಕಾರಿಗಳು ಸಲ್ಲಿಸಿರುವ ಕೋರಿಕೆಯಂತೆ ಹೆಚ್ಚಿನ ಭದ್ರತೆ ಒದಗಿಸಲಾಗುವುದು.

ನ್ಯಾಯಾಲಯದ ಸುತ್ತಮುತ್ತ ಕೂಡ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗುವುದು~ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.