ಶನಿವಾರ, ಏಪ್ರಿಲ್ 10, 2021
30 °C

ರೆಡ್ಡಿ ಪತ್ನಿಗೆ ಜಾಮೀನು ಮಂಜೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅಸೋಸಿಯೇಟೆಡ್ ಮೈನಿಂಗ್ ಕಂಪೆನಿ (ಎಎಂಸಿ) ವಿರುದ್ಧ ಸಿಬಿಐ ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ಅವರ ಪತ್ನಿ ಜಿ.ಲಕ್ಷ್ಮಿ ಅರುಣಾ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಮಂಗಳವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.ಮಹಿಳೆ ಎಂಬ ಕಾರಣದಿಂದ ಜಾಮೀನು ಮಂಜೂರು ಮಾಡಲಾಗಿದೆ ಎಂದು ನ್ಯಾಯಾಧೀಶ ಬಿ.ಎಂ.ಅಂಗಡಿ ಅವರು ತಿಳಿಸಿದ್ದಾರೆ. ಒಂದು ಲಕ್ಷ ರೂಪಾಯಿ ಮೊತ್ತದ ಬಾಂಡ್, ಅಷ್ಟೇ ಮೊತ್ತದ ಎರಡು ಭದ್ರತೆ ನೀಡುವಂತೆ, ತನಿಖೆಗೆ ಸಹಕರಿಸುವಂತೆ, ನ್ಯಾಯಾಲಯದ ಅನುಮತಿ ಪಡೆದುಕೊಳ್ಳದೆ ಊರು ಬಿಟ್ಟು ಹೋಗದಂತೆ ಷರತ್ತು ವಿಧಿಸಲಾಗಿದೆ.ಸುಪ್ರೀಂಕೋರ್ಟ್ ಆದೇಶದಂತೆ ಎಎಂಸಿ ವಿರುದ್ಧ ಮೊಕದ್ದಮೆ ದಾಖಲಿಸಿದ್ದ ಸಿಬಿಐ ಪೊಲೀಸರು, ತನಿಖೆ ನಡೆಸಿದ್ದರು. ರೆಡ್ಡಿ, ಲಕ್ಷ್ಮಿ ಸೇರಿದಂತೆ ಏಳು ಆರೋಪಿಗಳ ವಿರುದ್ಧ ಮೇ 30ರಂದು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ಲಕ್ಷ್ಮಿ ಅರುಣಾ ಪ್ರಕರಣದ ಎರಡನೇ ಆರೋಪಿ. ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಲಕ್ಷ್ಮಿ ಅರುಣಾ ಅವರಿಗೆ ಸಮನ್ಸ್ ಜಾರಿಗೊಳಿಸುವಂತೆ ನ್ಯಾಯಾಲಯ ಆದೇಶಿಸಿತ್ತು.ಈ ಕಾರಣದಿಂದ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಲಕ್ಷ್ಮಿ ಅರುಣಾ ಮಂಗಳವಾರ ನ್ಯಾಯಾಲಯಕ್ಕೆ ಹಾಜರಾದರು. ್ರಕರಣದ ವಿಚಾರಣೆಯನ್ನು ಇದೇ 16ಕ್ಕೆ ಮುಂದೂಡಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.