ಸೋಮವಾರ, ಮೇ 17, 2021
27 °C

ರೆಡ್ಡಿ ಬಂಧನದಿಂದ ಸರ್ಕಾರಕ್ಕೆ ಅಪಾಯವಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಮಾಜಿ ಸಚಿವ ಜಿ.ಜನಾರ್ಧನ ರೆಡ್ಡಿ ಬಂಧನದಿಂದ ಸರ್ಕಾರದ ಮೇಲೆ ಯಾವುದೇ ರೀತಿಯ ಪ್ರತಿಕೂಲ ಪರಿಣಾಮ ಬೀರುವುದಿಲ್ಲ. ಒಬ್ಬ ವ್ಯಕ್ತಿಯಿಂದ ಸರ್ಕಾರಕ್ಕೆ ಅಪಾಯ ಇಲ್ಲ ಎಂದು ಜಿಲ್ಲಾ ಉಸ್ತು ವಾರಿ ಸಚಿವ ಎ.ನಾರಾಯಣಸ್ವಾಮಿ ತಿಳಿಸಿದರು.ನಗರದಲ್ಲಿ ಸೋಮವಾರ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, `ಜನಾರ್ಧನ ರೆಡ್ಡಿಯವರನ್ನು ಯಾವ ಹಿನ್ನೆಲೆಯಲ್ಲಿ ಬಂಧಿಸಿ ದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ಸಿಬಿಐ ಪೊಲೀಸರು ತನಿಖಾ ವರದಿ ಒಪ್ಪಿಸಿದ ನಂತರವಷ್ಟೇ ಬಂಧನದ ಕಾರಣ ತಿಳಿದು ಬರಲಿದೆ~ ಎಂದರು.`ಕೊಪ್ಪಳ ಉಪಚುನಾವಣೆಯನ್ನು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡರ ನೇತೃತ್ವದಲ್ಲಿ ಎದುರಿಸುತ್ತೇವೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂ ರಪ್ಪ ಅವರು ಸಹ ಪಕ್ಷದ ಗೆಲುವಿಗಾಗಿ ತಮ್ಮದೇ ಆದ ರೀತಿಯಲ್ಲಿ ಶ್ರಮಿಸಲಿದ್ದಾರೆ~ ಎಂದು ಅವರು ತಿಳಿಸಿದರು.`ಮಾಜಿ ಸಚಿವ ಶ್ರೀರಾಮುಲು ಅವರು ಸಂಘ ಪರಿವಾರದಿಂದ ಬಂದವರು. ಬಿಜೆಪಿಯ ಕಟ್ಟಾ ಕಾರ್ಯ ಕರ್ತರು. ಅವರು ಬಿಜೆಪಿ ಯನ್ನು ತೊರೆಯುವುದಿಲ್ಲ ಎಂಬ ನಂಬಿಕೆಯಿದೆ. ಅವರು ಬಿಜೆಪಿಯಲ್ಲೇ ಉಳಿದುಕೊಂಡು ಪಕ್ಷವನ್ನು ಇನ್ನಷ್ಟು ಬಲಪಡಿಸಲಿದ್ದಾರೆ~ ಎಂದು ಅವರು ತಿಳಿಸಿದರು.ಚಿಕ್ಕಬಳ್ಳಾಪುರದಲ್ಲಿ ಗುರುಭವನ ನಿರ್ಮಾಣಕ್ಕೆ ಸಂಬಂಧಿಸಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, `ಶಿಕ್ಷಕರಲ್ಲಿ ಒಗ್ಗಟ್ಟಿನ ಕೊರತೆ ಮತ್ತು ಗುಂಪುಗಾರಿಕೆಯಿಂದ ಗುರುಭವನ ಇನ್ನೂ ನಿರ್ಮಾಣಗೊಂಡಿಲ್ಲ. ಜಿಲ್ಲಾಧಿಕಾರಿ, ಶಾಸಕರು ಮತ್ತು ಶಿಕ್ಷಕರ ಜತೆ ಸಭೆನಡೆಸಿ, ಗುರುಭವನ ಸಂಬಂಧಿಸಿದ ಸಮಸ್ಯೆಯನ್ನು ಬಗೆಹರಿಸಲಾಗುವುದು~ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.