ಮಂಗಳವಾರ, ಮೇ 11, 2021
25 °C

ರೆಡ್ಡಿ ಬಂಧನ ಅವಧಿ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ಮತ್ತು ಅವರ ಬಂಟ ಮೆಹಫೂಜ್ ಅಲಿಖಾನ್ ನ್ಯಾಯಾಂಗ ಬಂಧನದ ಅವಧಿಯನ್ನು ಏಪ್ರಿಲ್ 27ರವರೆಗೆ ವಿಸ್ತರಿಸಿ ಸಿಬಿಐ ವಿಶೇಷ ನ್ಯಾಯಾಲಯ ಮಂಗಳವಾರ ಆದೇಶ ಹೊರಡಿಸಿದೆ.ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ಎಂ.ಅಂಗಡಿ ಅವರು ಮಂಗಳವಾರ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ನಡೆಸಿದರು.  ಏ.27ಕ್ಕೆ ವಿಚಾರಣೆ ಮುಂದೂಡಿದ ನ್ಯಾಯಾಧೀಶರು, ಅಲ್ಲಿಯವರೆಗೂ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ಹೊರಡಿಸಿದರು.ಖುದ್ದು ಹಾಜರಿಗೆ ಕೋರಿಕೆ:  ವಿಚಾರಣೆ ಮುಗಿಯುವ ಹಂತದಲ್ಲಿ ನೇರವಾಗಿ ನ್ಯಾಯಾಧೀಶರ ಜೊತೆ ಮಾತನಾಡಲು ಅವಕಾಶ ನೀಡುವಂತೆ ಜನಾರ್ದನ ರೆಡ್ಡಿ ಮನವಿ ಮಾಡಿದರು. ಅದಕ್ಕೆ ಅವಕಾಶ ಕಲ್ಪಿಸಲಾಯಿತು. ಆಗ, ಏ.27ಕ್ಕೆ ಸುಪ್ರೀಂಕೋರ್ಟ್‌ನ ಹಿರಿಯ ವಕೀಲ ರಾಂಜೇಠ್ಮಲಾನಿ ತಮ್ಮ ಪರವಾಗಿ ವಾದ ಮಂಡಿಸಲಿದ್ದಾರೆ.ಈ ಅವಧಿಯಲ್ಲಿ ತಮ್ಮ ಖುದ್ದು ಹಾಜರಿಗೆ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದರು. ಮಾರ್ಚ್ 2ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಯನ್ನು ನೆನಪಿಸಿಕೊಂಡ ನ್ಯಾಯಾಧೀಶರು, ಮತ್ತೆ ಇಂತಹ ಘಟನೆಗಳು ಮರುಕಳಿಸಿದರೆ ಎಂಬ ಆತಂಕ ವ್ಯಕ್ತಪಡಿಸಿದರು.ಆದರೂ, ಖುದ್ದು ಹಾಜರುಪಡಿಸಲು ವ್ಯವಸ್ಥೆ ಮಾಡುವ ಕೋರಿಕೆಯನ್ನು ಪರಿಶೀಲಿಸುವುದಾಗಿ ತಿಳಿಸಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.