ರೆಡ್ಡಿ ಬಂಧನ: ಬಳ್ಳಾರಿ ಬಂದ್, ಕಚೇರಿಗಳ ಮೇಲೆ ದಾಳಿ

ಭಾನುವಾರ, ಮೇ 19, 2019
34 °C

ರೆಡ್ಡಿ ಬಂಧನ: ಬಳ್ಳಾರಿ ಬಂದ್, ಕಚೇರಿಗಳ ಮೇಲೆ ದಾಳಿ

Published:
Updated:

ಬಳ್ಳಾರಿ : ಮಾಜಿ ಸಚಿವ ಹಾಗೂ ಗಣಿ ಉದ್ಯಮಿ ಜನಾರ್ದನ ರೆಡ್ಡಿ ಹಾಗೂ ಓಎಂಸಿಯ ಮುಖ್ಯಸ್ಥ ಶ್ರೀನಿವಾಸರೆಡ್ಡಿ ಅವರನ್ನು ಸಿಬಿಐ ಬಂಧಿಸಿರುವ ಕ್ರಮವನ್ನು ಪ್ರತಿಭಟಿಸಿ ಮಂಗಳವಾರ ರೆಡ್ಡಿ ಬೆಂಬಲಿಗರು ಕರೆ ನೀಡಿದ್ದ ಬಳ್ಳಾರಿ ಬಂದ್ ವೇಳೆ ಸರ್ಕಾರಿ ಕಚೇರಿಗಳ ಮೇಲೆ ದಾಳಿ ನಡೆಸಿ, ಪೀಠೊಪಕರಣಗಳನ್ನು ಹಾನಿಗೊಳಿಸಲಾಗಿದೆ.ಔಷಧಿ ಅಂಗಡಿಗಳನ್ನು ಹೊರತು ಪಡಿಸಿ ಎಲ್ಲ ಅಂಗಡಿ ಮುಗ್ಗಟ್ಟುಗಳು ಮುಚ್ಚಿದ್ದು, ವಾಹನ ಸಂಚಾರ ಸ್ಥಗಿತಗೊಂಡು, ನಗರದಾದ್ಯಂತ ನೀರವ ಮೌನ ಮನೆ ಮಾಡಿದೆ. ಬಂದ್ ಹಿನ್ನೆಲೆಯಲ್ಲಿ ಸರ್ಕಾರಿ ಶಾಲಾ, ಕಾಲೇಜುಗಳಿಗೆ ಮಂಗಳವಾರ ಒಂದು ದಿನದ ರಜೆ ಘೋಷಿಸಲಾಗಿತ್ತು.ನಗರದ ಪ್ರಮುಖ ಸ್ಥಳಗಳಲ್ಲಿ ರೆಡ್ಡಿ ಅವರ ಅಭಿಮಾನಿಗಳು ಟೈರ್‌ಗಳಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸುವ ದೃಶ್ಯಗಳು ಕಂಡುಬಂದವು. ಉದ್ರಿಕ್ತ ಗುಂಪೊಂದು ಸರ್ಕಾರಿ ನೌಕರರು ಕಾರ್ಯನಿರ್ವಹಿಸುವುದನ್ನು ಆಕ್ಷೇಪಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ನಗರಾಭಿವೃದ್ಧಿ ಕೋಶದ ಕಚೇರಿ, ಉಪವಿಭಾಗಾಧಿಕಾರಿ ಕಚೇರಿ ಜತೆಗೆ ಆರ್‌ಟಿಓ ಹಾಗೂ ಅರಣ್ಯ ಇಲಾಖೆ ಕಚೇರಿಗಳ ಮೇಲೆ ದಾಳಿ ನಡೆಸಿ ಕಂಪ್ಯೂಟರ್, ಕುರ್ಚಿ, ಟೇಬಲ್, ಕಿಟಕಿ ಗಾಜುಗಳು ಒಡೆದು ದಾಂಧಲೆ ನಡೆಸಿದರು.

 

ದಾಳಿ ನಡೆಸಿದ ದುಷ್ಕರ್ಮಿಗಳಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಇತರರಿಗಾಗಿ ಶೋಧ ನಡೆಸಿದ್ದಾರೆ. ಸಿರಗುಪ್ಪ ಹಾಗೂ ಕಂಪ್ಲಿಯಲ್ಲಿ ಸಹ ಬಂದ್ ಶಾಂತಿಯುತವಾಗಿ ಯಶಸ್ವಿಯಾಗಿದೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry