ಮಂಗಳವಾರ, ಮೇ 11, 2021
24 °C

ರೆಡ್ಡಿ ಮುಂದುವರಿಕೆಗೆ ಜಿಜ್ಞಾಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಲ (ಕೆಎಂಎಫ್) ಅಧ್ಯಕ್ಷ ಜಿ.ಸೋಮಶೇಖರ ರೆಡ್ಡಿ ಅವರ ಅಧಿಕಾರಾವಧಿ ಇದೇ 20ಕ್ಕೆ ಕೊನೆಗೊಳ್ಳಲಿದ್ದು, ಅವರನ್ನು ಮುಂದುವರಿಸಬೇಕೇ ಅಥವಾ ಬೇಡವೇ ಎನ್ನುವುದರ ಬಗ್ಗೆ ರಾಜ್ಯ ಸರ್ಕಾರ ಇನ್ನೂ ಯಾವ ತೀರ್ಮಾನವನ್ನೂ ತೆಗೆದುಕೊಂಡಿಲ್ಲ.ಸೋಮಶೇಖರ ರೆಡ್ಡಿ ಅವರು ತಮ್ಮನ್ನು ಅಧಿಕಾರದಲ್ಲಿ ಮುಂದುವರಿಸುವಂತೆ ಕೋರಿಕೆ ಸಲ್ಲಿಸಿದ್ದು, ಆ ಕುರಿತು ಇನ್ನೂ ಅಂತಿಮ ನಿರ್ಧಾರ ಆಗಿಲ್ಲ ಎನ್ನಲಾಗಿದೆ.ಅಕ್ರಮ ಗಣಿಗಾರಿಕೆ ಆರೋಪದ ಹಿನ್ನೆಲೆಯಲ್ಲಿ ಬಳ್ಳಾರಿಯ ಗಣಿಧಣಿ ಶಾಸಕರನ್ನು ಸಂಪುಟಕ್ಕೆ ತೆಗೆದುಕೊಂಡಿಲ್ಲ. ಹೀಗಾಗಿ ಸೋಮಶೇಖರ ರೆಡ್ಡಿ ಅವರನ್ನಾದರೂ ಕೆಎಂಎಫ್ ಅಧ್ಯಕ್ಷ ಸ್ಥಾನದಲ್ಲೇ ಮುಂದುವರಿಸಬಹುದೇ ಎನ್ನುವ ಚಿಂತನೆಯೂ ನಡೆದಿದೆ ಎನ್ನಲಾಗಿದೆ.ಈ ಕುರಿತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಇದೇ 18ರಂದು ಬೆಂಗಳೂರಿನಲ್ಲಿ ಪ್ರಮುಖರ ಜತೆ ಚರ್ಚೆ ನಡೆಸಿ, ಅಂತಿಮವಾಗಿ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಕೆಲವರು ಇದೇ ಸಂದರ್ಭವನ್ನು ಬಳಸಿಕೊಂಡು ಸೋಮಶೇಖರ ರೆಡ್ಡಿ ಅವರನ್ನು ಅಧ್ಯಕ್ಷ ಸ್ಥಾನದಿಂದ ದೂರ ಇಟ್ಟರೆ ಸೂಕ್ತ ಎನ್ನುವ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.