ರೆಡ್ಡಿ ವಿಚಾರಣೆ ಮುಂದಕ್ಕೆ

7

ರೆಡ್ಡಿ ವಿಚಾರಣೆ ಮುಂದಕ್ಕೆ

Published:
Updated:
ರೆಡ್ಡಿ ವಿಚಾರಣೆ ಮುಂದಕ್ಕೆ

ಬಳ್ಳಾರಿ: ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ವಿಚಾರಣೆಯನ್ನು ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯವು ಫೆಬ್ರುವರಿ 7ಕ್ಕೆ ಮುಂದೂಡಿದೆ.ಕಾಂಗ್ರೆಸ್ ಮುಖಂಡ ದಿವಾಕರ ಬಾಬು ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆಯ ವಿಚಾರಣೆಯಲ್ಲಿ ಸಾಕ್ಷ್ಯ ಹೇಳಲು ರೆಡ್ಡಿ ಅವರು ಶುಕ್ರವಾರ ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು. ಆದರೆ ಸದ್ಯ ನಗರದಲ್ಲಿ ಸೇನಾ ನೇಮಕಾತಿ ರ್‍ಯಾಲಿ ಮತ್ತಿತರ ಕಾರ್ಯಕ್ರಮಗಳು ನಡೆಯುತ್ತಿದ್ದು, ಭದ್ರತೆ ಒದಗಿಸಲು ಕಷ್ಟವಾಗಲಿದೆ. ಹೀಗಾಗಿ ವಿಚಾರಣೆಯನ್ನು ಮುಂದೂಡಬೇಕು ಎಂದು ಜಿಲ್ಲಾ ಪೊಲೀಸರು ನ್ಯಾಯಾಧೀಶರಲ್ಲಿ ಮನವಿ ಮಾಡಿದ್ದರು.ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ವಿಚಾರಣೆ ಮುಂದೂಡಿರುವುದಾಗಿ ಜನಾರ್ದನ ರೆಡ್ಡಿ ಪರ ವಕೀಲ ಸಿದ್ದಾರೆಡ್ಡಿ `ಪ್ರಜಾವಾಣಿ'ಗೆ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry