ಶುಕ್ರವಾರ, ಜೂನ್ 25, 2021
23 °C

ರೆಡ್ಡಿ ವಿಚಾರಣೆ: ಹೆಚ್ಚಿನ ಪೊಲೀಸ್ ಭದ್ರತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಸಿಬಿಐ ನ್ಯಾಯಾಲಯದಲ್ಲಿ ಶುಕ್ರವಾರ (ಮಾ.2) ವಿಚಾರಣೆಗೆ ಹಾಜರಾಗಲಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಗೆ ಹೆಚ್ಚಿನ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.`ಜನಾರ್ದನ ರೆಡ್ಡಿ ಅವರು ವಿಚಾರಣೆಗೆ ಹಾಜರಾಗಲಿರುವ ನ್ಯಾಯಾಲಯದ ಬಳಿ ಸಾಕಷ್ಟು ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.ಅಲ್ಲದೇ ಜನಾರ್ದನ ರೆಡ್ಡಿ ಅವರ ಭದ್ರತೆಗೆ 300 ಮಂದಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ~ ಎಂದು ಕೇಂದ್ರ ವಿಭಾಗದ ಡಿಸಿಪಿ ಡಾ.ಜಿ.ರಮೇಶ್  ಅವರು  `ಪ್ರಜಾವಾಣಿ~ಗೆ ತಿಳಿಸಿದರು.ಆರು ಮಂದಿ ಎಸಿಪಿಗಳು, 20 ಇನ್‌ಸ್ಪೆಕ್ಟರ್‌ಗಳು, 35 ಎಸ್‌ಐಗಳು, 35 ಎಎಸ್‌ಐಗಳು, 102 ಮಂದಿ ಮುಖ್ಯ ಕಾನ್‌ಸ್ಟೇಬಲ್‌ಗಳು, 102 ಮಂದಿ ಕಾನ್‌ಸ್ಟೇಬಲ್‌ಗಳು ಹಾಗೂ ರಾಜ್ಯ ಮೀಸಲು ಪೊಲೀಸ್ ಪಡೆಯ (ಕೆಎಸ್‌ಆರ್‌ಪಿ) ನಾಲ್ಕು ತುಕಡಿಗಳನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದೆ ಎಂದು ಅವರು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.