ಶುಕ್ರವಾರ, ಏಪ್ರಿಲ್ 16, 2021
21 °C

ರೆಡ್ಡಿ, ಶ್ರೀರಾಮುಲುಗೆ ಹೈಕೋರ್ಟ್ ದಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ಲಾಭದಾಯಕ ಹುದ್ದೆ ಅಲಂಕರಿಸಿರುವ ಆರೋಪ ಎದುರಿಸುತ್ತಿರುವ ಸಚಿವರಾದ ಜಿ.ಜನಾರ್ದನ ರೆಡ್ಡಿ ಹಾಗೂ ಬಿ.ಶ್ರೀರಾಮುಲು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರಿಗೂ ತಲಾ 2,500 ರೂಪಾಯಿ ದಂಡ ವಿಧಿಸಿ ಹೈಕೋರ್ಟ್ ಶುಕ್ರವಾರ ಆದೇಶಿಸಿದೆ.ಈ ಪ್ರಕರಣವು ವಿಚಾರಣೆಗೆ ಬಂದಾಗ ರೆಡ್ಡಿ ಪರ ವಕೀಲರು ಗೈರು ಹಾಜರಾಗಿದ್ದರಿಂದ ಹಾಗೂ ದ್ವಿಪ್ರತಿಯಲ್ಲಿ ಅರ್ಜಿ ಸಲ್ಲಿಸದ ಕಾರಣ, ಅಸಮಾಧಾನ ವ್ಯಕ್ತಪಡಿಸಿದ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಕೇಹರ್ ಹಾಗೂ ನ್ಯಾಯಮೂರ್ತಿ ಅಶೋಕ ಬಿ.ಹಿಂಚಿಗೇರಿ ಅವರು ದಂಡ ವಿಧಿಸಿ ಆದೇಶಿಸಿದ್ದಾರೆ.ಓಬಳಾಪುರಂ ಮೈನಿಂಗ್ ಕಂಪೆನಿ ಹಾಗೂ ಅನಂತಪುರ ಮೈನಿಂಗ್ ಕಂಪೆನಿಯ ಮಾಲೀಕರಾಗಿರುವ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಹಾಗೂ ಶ್ರೀರಾಮುಲು ಲಾಭದಾಯಕ ಹುದ್ದೆ ಹೊಂದಿದ್ದು, ಅವರನ್ನು ಸಚಿವ ಸಂಪುಟದಿಂದಕೈಬಿಡುವಂತೆ ಶಾಸಕ ಕೆ.ಸಿ. ಕೊಂಡಯ್ಯ ಅವರು ರಾಜ್ಯಪಾಲರಿಗೆ ನೀಡಿರುವ ದೂರಿನ ವಿವಾದ ಇದಾಗಿದೆ. ಈ ದೂರಿನ ಮುಂದಿನ ಪ್ರಕ್ರಿಯೆಗೆ ತಡೆ ನೀಡುವಂತೆ ಅವರು ಏಕಸದಸ್ಯಪೀಠದ ಮುಂದೆ ಅರ್ಜಿ ಸಲ್ಲಿಸಿದ್ದರು.ಸರ್ವೇಕ್ಷಣಾ ಇಲಾಖೆಗೆ ದಂಡ: ಜಮೀನೊಂದರ ಸರ್ವೇ ಕಾರ್ಯವನ್ನು ಹೈಕೋರ್ಟ್ ಆದೇಶದ ಹೊರತಾಗಿಯೂ ನಡೆಸದ ಭಾರತೀಯ ಸರ್ವೇಕ್ಷಣಾ ಇಲಾಖೆಯ ನಿಯಂತ್ರಣಾಧಿಕಾರಿಗೆ ಐದು ಸಾವಿರ ರೂಪಾಯಿ ದಂಡ ವಿಧಿಸಿ ಹೈಕೋರ್ಟ್ ಶುಕ್ರವಾರ ಆದೇಶಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.