ರೆಡ್ಡಿ ಸಹಚರರ ಮನೆ ಮೇಲೆ ಸಿಬಿಐ ದಾಳಿ

ಸೋಮವಾರ, ಮೇ 20, 2019
29 °C

ರೆಡ್ಡಿ ಸಹಚರರ ಮನೆ ಮೇಲೆ ಸಿಬಿಐ ದಾಳಿ

Published:
Updated:

ಬಳ್ಳಾರಿ, (ಪಿಟಿಐ): ಅಕ್ರಮ ಗಣಿಗಾರಿಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಂಧಿತ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಇಬ್ಬರು ಸಹಚರರ ಮನೆಗಳ ಮೇಲೆ ಸಿಬಿಐ  ಸೋಮವಾರ ಬೆಳಿಗ್ಗೆ ದಾಳಿ ನಡೆಸಿ, ದಾಖಲೆಗಳಿಗಾಗಿ ಹುಡುಕಾಟ ನಡೆಸಿದೆ.

ರೆಡ್ಡಿ ಅವರ ಸಹಚರರಾದ ಸರಕು ಸಾಗಣೆಕೆದಾರರಾದ ಖಾರಾಪುಡಿ ಮಹೇಶ್ ಮತ್ತು ಸ್ವಸ್ತಿಕ್ ನಾಗರಾಜ್ ಅವರ ಮನೆಗಳ ಮೇಲೆ ಬೆಳಿಗ್ಗೆಯೇ ದಾಳಿ ನಡೆಸಿದ ಸಿಬಿಐ ತಂಡಗಳು ಈ ದಾಳಿಗಳಲ್ಲಿ ಅಕ್ರಮ ಗಣಿಗಾರಿಕೆಯ ಬಗ್ಗೆ ಮತ್ತಷ್ಟು ಮಾಹಿತಿ ಲಭ್ಯವಾಗಲಿದೆ ಎನ್ನಲಾಗಿದೆ.

ರೆಡ್ಡಿ ಅವರ ಸಹಚರರಾದ ಖಾರಾಪುಡಿ ಮಹೇಶ್ ಮತ್ತು ಸ್ವಸ್ತಿಕ್ ನಾಗರಾಜ್ ಅವರು ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ನಾಪತ್ತೆಯಾಗಿದ್ದಾರೆ.

ಅಕ್ರಮ ಗಣಿಗಾರಿಕೆಯ ಆರೋಪದ ಮೇಲೆ ಈ ತಿಂಗಳು ಮೊದಲ ವಾರದಲ್ಲಿ ಸೆ 5 ರಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತು ಅವರ ಭಾವ ಓಬಳಾಪುರಂ ಗಣಿ ಸಂಸ್ಥೆಯ ಆಡಳಿತ ನಿರ್ದೇಶಕ ಬಿ.ವಿ.ಶ್ರೀನಿವಾಸ ರೆಡ್ಡಿ ಅವರನ್ನು ಸಿಬಿಐ ಬಂಧಿಸಿತ್ತು. ಅಂದಿನಿಂದ ಇಂದಿನವರೆಗೂ ಅವರು ನ್ಯಾಯಾಂಗದ ಬಂಧನದಲ್ಲಿದ್ದಾರೆ. 

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry