ಬುಧವಾರ, ಜೂನ್ 23, 2021
21 °C

ರೆಸಾರ್ಟ್: ಸಚಿವರ ವಿರುದ್ಧ ಕ್ರಮಕ್ಕೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಾಯಕತ್ವದ ವಿರುದ್ಧ ಬಂಡಾಯ ಎದ್ದು ರೆಸಾರ್ಟ್‌ನಲ್ಲಿ ಬೀಡುಬಿಟ್ಟಿದ್ದ ಸಚಿವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಪೌರಾಡಳಿತ ಸಚಿವ ಬಾಲಚಂದ್ರ ಜಾರಕಿಹೊಳಿ ನೇತೃತ್ವದ ನಿಯೋಗ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರನ್ನು ಒತ್ತಾಯಿಸಿದೆ.



ಮಂಗಳವಾರ ಸಂಜೆ ಗೃಹ ಕಚೇರಿ `ಕೃಷ್ಣಾ~ದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ಜಾರಕಿಹೊಳಿ ಮತ್ತು ಅವರ ಬೆಂಬಲಿಗ ಶಾಸಕರು, ಬಂಡಾಯ ಸಚಿವರ ವಿರುದ್ಧ ತಕ್ಷಣ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.



ರಾಜ್ಯಸಭಾ ಚುನಾವಣೆಗೆ ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಬಿ.ಜೆ.ಪುಟ್ಟಸ್ವಾಮಿ ಅವರ ನಾಮಪತ್ರಕ್ಕೆ ಸೂಚಕರಾಗಿ ಸಹಿ ಮಾಡಿರುವ ಹತ್ತು ಜನ ಶಾಸಕರ ಸದಸ್ಯತ್ವವನ್ನು ಅನರ್ಹಗೊಳಿಸುವಂತೆಯೂ ಅವರು ಆಗ್ರಹಿಸಿದ್ದಾರೆ.



ಈಗ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಸಚಿವರು, ಶಾಸಕರ ವಿರುದ್ಧ ಯಾಕೆ ಕ್ರಮಕೈಗೊಳ್ಳಬಾರದು ಎಂದು ಅವರು ಪ್ರಶ್ನಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.